ಅಂಕೋಲಾ: ಶಾಸಕ ರಘುಪತಿ ಭಟ್ ಕಾರು ಢಿಕ್ಕಿ; ಬೈಕ್ ಸವಾರ ಗಂಭೀರ
Update: 2020-01-05 22:44 IST
ಉಡುಪಿ, ಜ.5: ಶಾಸಕ ರಘುಪತಿ ಭಟ್ ಅವರು ಸಂಚರಿಸುತ್ತಿದ್ದ ಕಾರು ಬೈಕೊಂದಕ್ಕೆ ಢಿಕ್ಕಿ ಹೊಡೆದ ಘಟನೆ ಅಂಕೋಲಾ ಸಮೀಪ ನಡೆದಿರುವುದು ವರದಿಯಾಗಿದೆ.
ಇದರಿಂದ ತೀವ್ರ ಗಾಯಗೊಂಡಿರುವ ಬೈಕ್ ಸವಾರನನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಘುಪತಿ ಭಟ್ ಅವರು ಗೋವಾ ಮುಖ್ಯಮಂತ್ರಿಯನ್ನು ಭೇಟಿಯಾಗಿ ಉಡುಪಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಂಕೋಲಾ ಸಮೀಪದ ಡಿವೈಡರ್ ಬಳಿ ಬೈಕ್ ಸವಾರ ಏಕಾಏಕಿಯಾಗಿ ರಸ್ತೆ ನುಗ್ಗಿದ್ದರಿಂದ ಹೆದ್ದಾರಿಯಲ್ಲಿ ಬರುತ್ತಿದ್ದ ಶಾಸಕರ ಕಾರು ಬೈಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಗಂಭೀರ ಗಾಯ ಗೊಂಡಿದ್ದಾರೆ. ಗಾಯಾಳುವಿನ ವಿವರಗಳು ತಿಳಿದುಬಂದಿಲ್ಲ. ಅಪಘಾತದ ಗಾಯಾಳುವಿಗೆ ಅಂಕೋಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.