ಐಟಿ ಅಧಿಕಾರಿಗಳು, ರಾಜಕಾರಣಿಗಳ ವಿರುದ್ಧವೂ ತನಿಖೆ: ಹೈಕೋರ್ಟ್‌ಗೆ ಸಿಬಿಐ ಹೇಳಿಕೆ

Update: 2020-01-06 17:19 GMT

ಬೆಂಗಳೂರು, ಜ.6: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಮುಚ್ಚಿದ ಲಕೋಟೆಯಲ್ಲಿ ಸಿಬಿಐ ತನಿಖಾ ಪ್ರಗತಿ ವರದಿ ಹೈಕೋರ್ಟ್‌ಗೆ ಸಲ್ಲಿಕೆಯಾಯಿತು.

ಈ ಕುರಿತು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲ ಆರ್.ಕೋತ್ವಾಲ್, ಜಿ.ಆರ್.ಮೋಹನ್ ಅವರು, ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳ ಬದಲಾವಣೆ ಬಗ್ಗೆ ಸಂದೇಹ ವ್ಯಕ್ತಪಡಿಸಿದರು. ಸಿಬಿಐ ಪರ ವಾದಿಸಿದ ವಕೀಲ ಪ್ರಸನ್ನಕುಮಾರ್ ಅವರು, ಐಎಂಎ ವಂಚನೆ ಪ್ರಕರಣದ ತನಿಖಾ ತಂಡದ ಮುಖ್ಯಸ್ಥ ಎ.ವೈ.ವಿ.ಕೃಷ್ಣ ರವರ ಸಿಬಿಐನನೊಂದಿಗಿನ ಸೇವಾವಧಿ 2020ರ ಜ.17ರಂದು ಮುಗಿಯಲಿದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಈವರೆಗೆ ಸಿಬಿಐ ತಂಡದ ತನಿಖೆ ಸಮಾಧಾನಕರವಾಗಿದೆ. ಇಂಥ ಸಂದರ್ಭದಲ್ಲಿ ತಂಡದ ಮುಖ್ಯಸ್ಥರ ಮುಂದುವರಿಸುವುದು ಸೂಕ್ತವಾಗಿದೆ. ಜ.16ರೊಳಗೆ ಈ ಬಗ್ಗೆ ನಿರ್ಧರಿಸಲು ಕೇಂದ್ರ ಸರಕಾರಕ್ಕೆ ಸೂಚನೆ ನೀಡಿತು.

ಐಟಿ ಅಧಿಕಾರಿಗಳು, ರಾಜಕಾರಣಿಗಳು ಹಾಗೂ ಪೊಲೀಸರ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ಪರ ವಕೀಲರು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News