×
Ad

ಉಗಮ ಸ್ಥಾನದಲ್ಲೆ ಕಾವೇರಿ ನದಿ ಮಲಿನ: ಕ್ರಿಯಾ ಯೋಜನೆ ರೂಪಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2020-01-06 23:20 IST

ಬೆಂಗಳೂರು, ಜ.6: ಕಾವೇರಿ ನದಿಯ ಉಗಮ ಸ್ಥಾನದಲ್ಲೇ ಮಲಿನವಾಗುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಜ.30ರೊಳಗೆ ಕ್ರಿಯಾ ಯೋಜನೆ ರೂಪಿಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭಾಗಮಂಡಲದ ಒಳಚರಂಡಿಯ ನೀರು ನದಿ ಸೇರದಂತೆ ನೋಡಿಕೊಳ್ಳುವುದು ಸರಕಾರದ ಜವಾಬ್ದಾರಿ. ಆದರೆ, ಆ ಕೆಲಸವನ್ನು ಯಾಕೆ ಇನ್ನೂ ಮಾಡಿಲ್ಲ ಎಂದು ಪ್ರಶ್ನಿಸಿದ ನ್ಯಾಯಪೀಠವು ಜ.30ರೊಳಗೆ ಕ್ರಿಯಾ ಯೋಜನೆ ರೂಪಿಸಬೇಕು. ಹಾಗೂ ಪ್ರಗತಿ ವರದಿ ಸಲ್ಲಿಸಬೇಕೆಂದು ಸೂಚಿಸಿ, ಫೆ.10ಕ್ಕೆ ವಿಚಾರಣೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News