ಕೆಆರ್‌ಎಸ್ ಪರಿಸರದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಸಿಎಂ ಸೂಚನೆ
Update: 2020-01-06 23:23 IST
ಬೆಂಗಳೂರು, ಜ. 6: ಕೃಷ್ಣರಾಜ ಸಾಗರ ಅಣೆಕಟ್ಟು ಹಾಗೂ ಬೃಂದಾವನ ಉದ್ಯಾನದ ಪರಿಸರದಲ್ಲಿ ಗಣಿಗಾರಿಕೆ ನಿಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅಣೆಕಟ್ಟಿನ ಭದ್ರತೆಗೆ ಧಕ್ಕೆಯಾಗದಂತೆ ಈ ಪರಿಸರದಲ್ಲಿ ಕೂಡಲೇ ಗಣಿಗಾರಿಕೆ ಸ್ಥಗಿತಗೊಳಿಸಿ ವರದಿ ಸಲ್ಲಿಸುವಂತೆ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಲ್ಲದೆ ಸೂಕ್ಷ್ಮ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಿದರು.