×
Ad

ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಮೊದಲ ಆದ್ಯತೆ: ಜೆಎನ್‌ಯು ಕುಲಪತಿ

Update: 2020-01-07 00:10 IST

ಹೊಸದಿಲ್ಲಿ, ಜ. 6: ಕ್ಯಾಂಪಸ್‌ನಲ್ಲಿ ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿರುವ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾನಿಲಯದ ಕುಲಪತಿ ಎಂ. ಜಗದೀಶ್ ಕುಮಾರ್, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಮೊದಲ ಆದ್ಯತೆ ಎಂದು ಹೇಳಿದ್ದಾರೆ.

ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ನಿಲ್ಲಲಿದೆ. ಚಳಿಗಾಲದ ಸೆಮಿಸ್ಟರ್ ನೋಂದಣಿ ಯಾವುದೇ ಅಡೆತಡೆ ಇಲ್ಲದೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ನೋಂದಣಿ ಪ್ರಕ್ರಿಯೆ ಬಗ್ಗೆ ಆತಂಕಪಡುವ ಅಗತ್ಯ ಇಲ್ಲ. ನಮ್ಮ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿ ಕಾಪಾಡುವುದು ವಿಶ್ವವಿದ್ಯಾನಿಲಯದ ಮುಖ್ಯ ಆದ್ಯತೆ ಎಂದು ಅವರು ತಿಳಿಸಿದರು. ಚಳಿಗಾಲದ ಸೆಮಿಸ್ಟರ್‌ನ ನೋಂದಣಿ ಪ್ರಕ್ರಿಯೆಗೆ ಅಡ್ಡಿ ಉಂಟು ಮಾಡಲು ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಸಂವಹನ ಸರ್ವರ್‌ಗೆ ಹಾನಿ ಉಂಟು ಮಾಡಿದ್ದಾರೆ ಎಂದು ಅವರು ಹೇಳಿದರು. ‘‘ಸಾವಿರಾರು ವಿದ್ಯಾರ್ಥಿಗಳು ಚಳಿಗಾಲದ ಸೆಮಿಸ್ಟರ್ ನೋಂದಣಿ ಮಾಡುವುದನ್ನು ತಡೆದಿದ್ದಾರೆ.

ವಿಶ್ವವಿದ್ಯಾನಿಲಯ ಕಾರ್ಯ ನಿರ್ವಹಿಸುವುದನ್ನು ಅಡ್ಡಿಪಡಿಸುವ ಸ್ಪಷ್ಟ ಉದ್ದೇಶವನ್ನು ಅವರು ಹೊಂದಿದ್ದಾರೆ. ಇದು ಗೂಂಡಾಗಿರಿ ಹಾಗೂ ಜೆಎನ್‌ಯುನ ಸಿದ್ಧಾಂತಗಳಿಗೆ ವಿರುದ್ಧವಾದದು. ಅಂತಹ ಯಾವುದೇ ವಿದ್ಯಾರ್ಥಿಗಳನ್ನು ಬಿಡುವುದಿಲ್ಲ. ಸೂಕ್ತ ಕ್ರಮ ಕೈಗೊಳ್ಳಲಾಗುವುದು’’ ಎಂದು ಎಂ. ಜಗದೀಶ್ ಕುಮಾರ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News