×
Ad

ಎನ್‌ಆರ್‌ಸಿ-ಸಿಎಎ ಬಗ್ಗೆ ಕಾಂಗ್ರೆಸ್‌ನಿಂದ ಅಪಪ್ರಚಾರ: ಬಸವರಾಜು ಬೊಮ್ಮಾಯಿ ಆರೋಪ

Update: 2020-01-07 18:46 IST

ಮಂಗಳೂರು, ಜ.7: ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಸುರತ್ಕಲ್‌ನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪೋಸ್ಟ್ ಕಾರ್ಡ್ ಅಭಿಯಾನಕ್ಕೆ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಹಿ ಹಾಕುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಎನ್‌ಆರ್‌ಸಿ-ಸಿಎಎಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆಯಿಲ್ಲ. ಅವರ ಆಧಾರ್ ಕಾರ್ಡ್, ರೇಶನ್ ಕಾರ್ಡ್ ಕಿತ್ತುಕೊಳ್ಳುವುದಿಲ್ಲ. ಸ್ಥಳಾಂತರವನ್ನೂ ಮಾಡುವುದಿಲ್ಲ. ಅವರ ಬದುಕಿಗೆ ಮತ್ತಷ್ಟು ಭದ್ರತೆ ನಿಡುತ್ತೇವೆ ಎಂದರು.

ಈ ಕಾಯ್ದೆಯ ಬಗ್ಗೆ ಕಾಂಗ್ರೆಸ್ ತಪ್ಪು ಮಾಹಿತಿ ನೀಡಿ ಮುಸ್ಲಿಮರಲ್ಲಿ ಅಭದ್ರತೆಯ ವಾತಾವರಣ ಸೃಷ್ಟಿಸುತ್ತಿದೆ. ಆ ಮೂಲಕ ದೇಶದ್ರೋಹದ ಕೆಲಸವನ್ನೂ ಮಾಡುತ್ತದೆ ಎಂದರು. ಈ ಸಂದರ್ಭ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಡಾ.ಭರತ್ ಶೆಟ್ಟಿ, ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ ಸಹಿತ ಪಕ್ಷದ ಮುಖಂಡರು, ಮನಪಾ ಸದಸ್ಯರು, ಕಾರ್ಯಕರ್ತರು, ನಾಗರಿಕರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News