ಗಡಿನಾಡ ಸಿರಿ ಪ್ರಶಸ್ತಿ ಪ್ರದಾನ
Update: 2020-01-07 18:51 IST
ಮಂಗಳೂರು, ಜ.7: ಕರ್ನಾಟಕ ಜಾನಪದ ಪರಿಷತ್ ಕೇರಳ ಗಡಿನಾಡ ಘಟಕ ಮತ್ತು ತುಳುವರ್ಲ್ಡ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಪೈವಳಿಕೆ ಕಾಯರ್ಕಟ್ಟೆ ಕುಲಾಲ ಮಂದಿರದಲ್ಲಿ ಇತ್ತೀಚೆಗೆ ನಡೆದ ಗಡಿನಾಡ ಜಾನಪದ ಮೇಳ ಮತ್ತು ತುಳು ಕಾವ್ಯಯಾನ ಕಾರ್ಯಕ್ರಮದಲ್ಲಿ ಕತರ್ ಬಂಟರ ಸಂಘದ ಮಾಜಿ ಅಧ್ಯಕ್ಷ, ಉದ್ಯಮಿ ಡಾ.ರವಿ ಶೆಟ್ಟಿ ಮೂಡಂಬೈಲು ಅವರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗಡಿನಾಡ ಸಿರಿ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭ ಮಂಜೇಶ್ವರ ಶಾಸಕ ಎಂಸಿ ಕಮರುದ್ದೀನ್, ಉದ್ಯಮಿ ಡಾ.ತಲ್ಲೂರು ಶಿವರಾಮ ಶೆಟ್ಟಿ, ಕಸಾಪದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಪೈವಳಿಕೆ ಅರಮನೆಯ ಬಲ್ಲಾಳ ಅರಸರು, ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಎಕೆಎಂ ಅಶ್ರಫ್, ಕುಂಬಳೆ ಗ್ರಾಪಂ ಅಧ್ಯಕ್ಷ ಪುಂಡರೀಕಾಕ್ಷ ಕೆ. ಎಲ್., ಡಾ. ರಾಜೇಶ್ ಆಳ್ವ ಬದಿಯಡ್ಕ, ರವಿ ನಾಯ್ಕಾಪು ಉಪಸ್ಥಿತರಿದ್ದರು.