×
Ad

ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಅನುದಾನ ಕಡಿಮೆ: ಯಡಿಯೂರಪ್ಪ

Update: 2020-01-07 19:21 IST
ಫೈಲ್ ಚಿತ್ರ

ಬೆಂಗಳೂರು, ಜ. 7: ರಾಜ್ಯದ ನೆರೆ ಪರಿಹಾರಕ್ಕೆ ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಅನುದಾನ ಕಡಿಮೆಯಾಗಿದ್ದು, ಇನ್ನೂ ಹೆಚ್ಚಿನ ಅನುದಾನ ಬಿಡುಗಡೆಗೆ ಕೋರಿ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರ ಎರಡು ಕಂತುಗಳಲ್ಲಿ ಬಿಡುಗಡೆ ಮಾಡಿರುವ ಅನುದಾನ ಸಾಕಾಗುವುದಿಲ್ಲ. ಇನ್ನೂ ಹೆಚ್ಚುವರಿಯಾಗಿ ಹಣ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ರಾಜ್ಯಕ್ಕೆ ಬಂದು ಹೋದ ಮೂರು ದಿನಗಳಲ್ಲೆ 1,869 ಕೋಟಿ ರೂ.ಬಿಡುಗಡೆ ಮಾಡಿದ್ದು, ಇದಕ್ಕಾಗಿ ನಾನು ರಾಜ್ಯದ ಜನತೆ ಪರವಾಗಿ ಅವರನ್ನು ಅಭಿನಂದಿಸುವೆ. ದಿಲ್ಲಿಗೆ ತೆರಳಲಿದ್ದು, ಈ ವೇಳೆ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಅನುದಾನ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದರು.

ರೈತ ಪರ ಬಜೆಟ್: ಬಜೆಟ್ ಮಂಡನೆಗೆ ಸಿದ್ದತೆ ನಡೆಸಿದ್ದು, ಅಧಿಕಾರಿಗಳು, ರೈತರು, ತಜ್ಞರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರ ಸಲಹೆ ಪಡೆಯಲಿದ್ದೇನೆ ಎಂದ ಅವರು, ಎಲ್ಲರ ಮಾರ್ಗದರ್ಶನ ಪಡೆದು ಅಭಿವೃದ್ಧಿ ಮತ್ತು ರೈತ ಪರ ಆಯವ್ಯಯ ಮಂಡಿಸುವೆ ಎಂದು ಹೇಳಿದರು.

 ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿ ವಿಪಕ್ಷಗಳ ಮುಖಂಡರ ಸಲಹೆಗಳನ್ನು ಸ್ವೀಕರಿಸುವೆ. ರಾಜ್ಯದ ಕಲ್ಯಾಣಕ್ಕಾಗಿ ಅವರೂ ಸಲಹೆ ನೀಡಲಿ ಎಂದ ಅವರು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ನಮ್ಮ ಸರಕಾರದ ಆದ್ಯತೆ ಎಂದು ಇದೇ ವೇಳೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News