ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ: ಸರಕಾರದ ಮೇಲೆ ಒತ್ತಡ ಹೇರಲು ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಮನವಿ

Update: 2020-01-07 17:44 GMT

ಬೆಂಗಳೂರು, ಜ. 7: ಪರಿಶಿಷ್ಟ ಪಂಗಡ(ಎಸ್ಟಿ)ದ ಸಮುದಾಯಗಳಿಗೆ ಶೇ.7.5ರಷ್ಟು ಮೀಸಲಾತಿ ಕಲ್ಪಿಸುವ ಸಂಬಂಧ ಸರಕಾರದ ಮೇಲೆ ಹೇರಬೇಕು. ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಬೇಕೆಂದು ಕೋರಿ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಮನವಿ ಮಾಡಿದ್ದಾರೆ.

ಮಂಗಳವಾರ ಇಲ್ಲಿನ ಕಾವೇರಿಯಲ್ಲಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಸ್ವಾಮೀಜಿ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಪರಿಶಿಷ್ಟ ಪಂಗಡದ ಶಾಸಕರು, ಸಮುದಾಯದ ಮೀಸಲಾತಿ ಹೆಚ್ಚಳದ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಟ್ಟರು.

ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಅತ್ಯಂತ ಹಿಂದುಳಿದಿರುವ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7.5ಕ್ಕೆ ಹೆಚ್ಚಳ ಮಾಡುವುದು ಅನಿವಾರ್ಯ. ಆ ಹಿನ್ನೆಲೆಯಲ್ಲಿ ಸಮುದಾಯದ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಸಿದ್ದರಾಮಯ್ಯಗೆ ಸ್ವಾಮೀಜಿ ನೇತೃತ್ವದ ನಿಯೋಗ ಮನವಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News