ರೋಹಿತ್ ದಾಖಲೆ ಮುರಿದ ಕೊಹ್ಲಿ

Update: 2020-01-08 04:40 GMT

ಇಂದೋರ್, ಜ.8: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ಇಂದು ಸಹ ಆಟಗಾರ ರೋಹಿತ್ ಶರ್ಮಾರನ್ನು ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್‌ಗಳ ದಾಖಲೆಯನ್ನು ಹಿಂದಿಕ್ಕುವ ಮೂಲಕ ಹೊಸ ವರ್ಷದಲ್ಲಿ ಅಭಿಯಾನ ಆರಂಭಿಸಿದ್ದಾರೆ.

ರೋಹಿತ್ ಮತ್ತು ಕೊಹ್ಲಿ ಟ್ವೆಂಟಿ-20ಯಲ್ಲಿ ರನ್‌ನ್ನು 2,633ಕ್ಕೆ ಏರಿಸುವ ಮೂಲಕ 2019ನೇ ವರ್ಷವನ್ನು ಕೊನೆಗೊಳಿಸಿದ್ದರು. ಕೊಹ್ಲಿ ಶ್ರೀಲಂಕಾ ವಿರುದ್ಧ ಇಂದೋರ್‌ನ ಹೋಲ್ಕರ್ ಸ್ಟೇಡಿಯಂನಲ್ಲಿ 12ನೇ ಓವರ್‌ನಲ್ಲಿ 1ರನ್ ಗಳಿಸುವ ಮೂಲಕ ರೋಹಿತ್ ಶರ್ಮಾ ದಾಖಲೆ ಮುರಿದರು. ಇಂದಿನ ಪಂದ್ಯದಲ್ಲಿ ಔಟಾಗದೆ 34 ರನ್ ಗಳಿಸಿದ ವಿರಾಟ್ ಕೊಹ್ಲಿ ಟ್ವೆಂಟಿ-20ಯಲ್ಲಿ ಒಟ್ಟು 2,663 ರನ್ ಗಳಿಸಿದ್ದಾರೆ. ಕೊಹ್ಲಿ 77 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ರೋಹಿತ್ ಶರ್ಮಾ 104ನೇ ಪಂದ್ಯದಲ್ಲಿ ರನ್‌ನ್ನು 2,633ಕ್ಕೆ ಏರಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News