ಹುಬ್ಬಳ್ಳಿಯಲ್ಲಿ ಕಾರ್ಮಿಕರಿಂದ ಪ್ರತಿಭಟನೆ

Update: 2020-01-08 07:36 GMT

ಹುಬ್ಬಳ್ಳಿ, ಜ.8: ಕಾರ್ಮಿಕ ಸುಧಾರಣೆ, ವಿದೇಶಿ ನೇರ ಹೂಡಿಕೆ ಮತ್ತು ಖಾಸಗೀಕರಣ ಸೇರಿದಂತೆ ಕೇಂದ್ರ ಸರಕಾರದ ನೀತಿಗಳನ್ನು ವಿರೋಧಿಸಿ ನಡೆಯುತ್ತಿರುವ ರಾಷ್ಟ್ರವ್ಯಾಪಿ ಮುಷ್ಕರದ ಅಂಗವಾಗಿ ಹುಬ್ಬಳ್ಳಿಯಲ್ಲಿ ಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಿದರು.

ಬ್ಯಾಂಕ್ ಎಂಪ್ಲಾಯ್ಸ್, ಎಲ್‌ಐಸಿ ನೌಕಕರ ಅಸೋಸಿಯೇಶನ್, ಸಿಐಟಿಯು, ಸಿಪಿಎಂ, ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ಸಂಘಟನೆಗಳ ನೇತೃತ್ವದಲ್ಲಿ ಅಂಬೇಡ್ಕರ ವೃತ್ತದ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News