×
Ad

ಜ.10ರಿಂದ 19ರವರೆಗೆ ‘ಕರಾವಳಿ ಉತ್ಸವ’

Update: 2020-01-08 14:01 IST

ಮಂಗಳೂರು, ಜ.8: ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವ ಸಮಿತಿಯ ವತಿಯಿಂದ ಈ ಬಾರಿಯ ಕರಾವಳಿ ಉತ್ಸವವು ಜ.10ರಿಂದ 19ರವರೆಗೆ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಉತ್ಸುವಾರಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಉತ್ಸವದ ಉದ್ಘಾಟನೆ ಜ.10ರಂದು ನಡೆಯಲಿದೆ. ಅಂದು ಸಂಜೆ 3:30ಕ್ಕೆ ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಮೆರವಣಿಗೆ, 5:30ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ವಸ್ತು ಪ್ರದರ್ಶನ ಉದ್ಘಾಟನೆ ಹಾಗೂ 6 ಗಂಟೆಗೆ ಕರಾವಳಿ ಉತ್ಸವದ ಉದ್ಘಾಟನೆ ನಡೆಯಲಿದೆ ಎಂದವರು ವಿವರಿಸಿದರು.

ಮೆರವಣಿಗೆ ಮತ್ತು ವಸ್ತು ಪ್ರದರ್ಶನವನ್ನು ಸಚಿವ ಶ್ರೀನಿವಾಸ ಪೂಜಾರಿ ಉದ್ಘಾಟಿಸ ಲಿದ್ದಾರೆ. ಉತ್ಸವವನ್ನು ಚಲನಚಿತ್ರ ರಿಷಬ್ ಶೆಟ್ಟಿ ಉದ್ಘಾಟಿಸುವರು. ಉತ್ಸವದ ಅಂಗವಾಗಿ ಕದ್ರಿ ಉದ್ಯಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಜ.17, 18 ಮತ್ತು 19ರಂದು ಪಣಂಬೂರು ಬೀಚ್‌ನಲ್ಲಿ ಬೀಚ್ ಉತ್ಸವ, ಗಾಳಿಪಟ ಉತ್ಸವ ನಡೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜಿ. ರೂಪಾ, ಮನಪಾ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News