×
Ad

ಸಾಹಿತ್ಯ ಸಮ್ಮೇಳನಕ್ಕೆ ಹಣ ಬಿಡುಗಡೆ ವಿಚಾರ: ಸಿಎಂ ಮಧ್ಯಪ್ರವೇಶಕ್ಕೆ ಜೆಡಿಎಸ್ ಆಗ್ರಹ

Update: 2020-01-08 18:22 IST

ಬೆಂಗಳೂರು, ಜ. 8: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ ವಿಚಾರವನ್ನು ಮುಂದಿಟ್ಟುಕೊಂಡು ಸಮ್ಮೇಳನಕ್ಕೆ ಹಣ ಬಿಡುಗಡೆ ಸಂಬಂಧ ಸಿಎಂ ಯಡಿಯೂರಪ್ಪ ಕೂಡಲೇ ಮಧ್ಯಪ್ರವೇಶಿಸಿ ಸಚಿವ ಸಿ.ಟಿ.ರವಿ ಉದ್ಧಟತನಕ್ಕೆ ಛೀಮಾರಿ ಹಾಕಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಅನುವು ಮಾಡಿಕೊಡಬೇಕೆಂದು ಜೆಡಿಎಸ್ ಆಗ್ರಹಿಸಿದೆ.

‘ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಿಡುಗಡೆಯಾದ ಹಣವನ್ನು ವೈಯಕ್ತಿಕ ದ್ವೇಷದಿಂದ ತಡೆ ಹಿಡಿದು ಕನ್ನಡ ಸಾಹಿತ್ಯದ ವಿರುದ್ಧವೇ ದ್ವೇಷ ಸಾಧಿಸುತ್ತಿರುವ ಸಚಿವ ಸಿ.ಟಿ.ರವಿ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News