ಪೌರತ್ವ ತಿದ್ದುಪಡಿ ಕಾಯ್ದೆಯ ಪರ ಬಿಜೆಪಿಯಿಂದ ಪೋಸ್ಟ್ ಕಾರ್ಡ್ ಅಭಿಯಾನ
Update: 2020-01-08 20:42 IST
ಮಂಗಳೂರು, ಜ.8: ಮಂಗಳೂರು ನಗರ ದಕ್ಷಿಣ ಮಂಡಲದ ಬಿಜೆಪಿ ವತಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಪೋಸ್ಟ್ ಕಾರ್ಡ್, ಸಹಿ ಸಂಗ್ರಹ ಅಭಿಯಾನಕ್ಕೆ ಮಂಗಳಾದೇವಿ ದೇವಸ್ಥಾನದ ಬಳಿ ಶಾಸಕ ಡಿ.ವೇದವ್ಯಾಸ್ ಕಾಮತ್ ಬುಧವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಕೈಗೊಂಡಿರುವ ಈ ಕಾಯ್ದೆಯಿಂದ ಇಲ್ಲಿನ ಮೂಲ ನಿವಾಸಿಗಳಿಗೆ ಏನೂ ಸಮಸ್ಯೆಯಾಗುವುದಿಲ್ಲ. ಆದರೆ ಕಾಂಗ್ರೆಸ್ ನಾಯಕರು ಕಾಯ್ದೆಯ ಕುರಿತು ಅರಿಯದೆ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆಪಾದಿಸಿದರು.
ಈ ಸಂದರ್ಭ ಕಾರ್ಪೊರೇಟರ್‌ಗಳು, ಬಿಜೆಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.