ಕಾರ್ಕಳ: ಮಾನಸಿಕ ಆರೋಗ್ಯ ತರಬೇತಿ ಕಾರ್ಯಾಗಾರ
ಉಡುಪಿ, ಜ.9: ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಯಲ್ಲಿ ಗುರುವಾರ ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿಗಳ ಹಾಗೂ ಜಿಲ್ಲಾ ಗೃಹರಕ್ಷಕದಳದ ವತಿಯಿಂದ ಮಾನಸಿಕ ಒತ್ತಡ ನಿವಾರಣೆ ಕುರಿತು ಕಾರ್ಯಾಗಾರ ನಡೆಯಿತು.
ಉಡುಪಿ ಗೃಹ ರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಡಾ. ಪ್ರಶಾಂತ್ ಶೆಟ್ಟಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಒತ್ತಡದ ಕರ್ತವ್ಯ ನಿರ್ವಹಿಸುವ ಸಂದರ್ದಲ್ಲಿ ಗೃಹರಕ್ಷಕರು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದು, ಇಂತಹ ಕಾರ್ಯಾಗಾರದಿಂದ ಒತ್ತಡ ನಿವಾರಣೆಗೆ ಸೂಕ್ತ ಮಾರ್ಗದರ್ಶನ ಸಿಗಲಿದ್ದು, ಇದರ ಸದುಪಯೋಗವನ್ನು ಗೃಹರಕ್ಷಕರು ಪಡೆದುಕೊಳ್ಳುವಂತೆ ಸೂಚಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ತಾಲೂಕು ಆರೋಗ್ಯ ಅಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಮಾತನಾಡಿ, ಕಾರ್ಕಳ ತಾಲೂಕಿ ನಲ್ಲಿ ಪ್ರಥಮ ಬಾರಿಗೆ ಗೃಹರಕ್ಷಕರಿಗೆ ಒತ್ತಡ ನಿವಾರಣೆಯ ತರಬೇತಿಯನ್ನು ಆಯೋಜಿಸಿದ್ದು, ಈ ತರಬೇತಿ ಅವರಿಗೆ ತುಂಬಾ ಸಹಕಾರಿಯಾಗಲಿದೆ ಎಂದರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆಯ ಮನೋರೋಗ ತಜ್ಞ ಡಾ. ಮಾನಸ್, ಸೈಕ್ಯಾಟ್ರಿಕ್ ಸೋಷಿಯಲ್ ವರ್ಕರ್ ವಸಂತಿ ನಾಯಕ್, ಜಿಲ್ಲಾ ಮಾನಸಿಕ ಆರೋಗ್ಯ ಕೇಂದ್ರದ ಸ್ಟಾಪ್ ನರ್ಸ್ ದೀಕ್ಷಾ ಕೆ., ಮಾನಸಿಕ ಒತ್ತಡ ನಿವಾರಣೆಯ ಕುರಿತು ವಿವಿದ ಚಟುವಟಿಕೆಗಳ ಮೂಲಕ ಮಾಹಿತಿ ನೀಡಿದರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆಯ ಮನೋರೋಗ ತಜ್ಞ ಡಾ. ಮಾನಸ್, ಸೈಕ್ಯಾಟ್ರಿಕ್ ಸೋಷಿಯಲ್ ವರ್ಕರ್ ವಸಂತಿ ನಾಯಕ್, ಜಿಲ್ಲಾ ಮಾನಸಿಕ ಆರೋಗ್ಯ ಕೇಂದ್ರದ ಸ್ಟಾಪ್ ನರ್ಸ್ ದೀಕ್ಷಾ ಕೆ., ಮಾನಸಿಕ ಒತ್ತಡ ನಿವಾರಣೆಯ ಕುರಿತು ವಿವಿದ ಚಟುವಟಿಕೆಗಳ ಮೂಲಕ ಮಾಹಿತಿ ನೀಡಿದರು. ಜಿಲ್ಲಾ ಗೃಹರಕ್ಷಕದಳ ಡೆಪ್ಯೂಟಿ ಕಮಾಂಡೆಂಟ್ ರಮೇಶ್, ಘಟಕಾಧಿಕಾರಿ ಗಳಾದ ಪ್ರಭಾಕರ್ ಸುವರ್ಣ, ಲಕ್ಷ್ಮಿನಾರಾಯಣ್ ರಾವ್, ನವೀನ್‌ಕುಮಾರ್ ಹಾಗೂ ಇತರರು ಭಾಗವಹಿಸಿದ್ದರು.