ಹಜ್‌ ಯಾತ್ರೆ-2020: ಜ.10ರಂದು ಲಾಟರಿ ಮೂಲಕ ಯಾತ್ರಾರ್ಥಿಗಳ ಆಯ್ಕೆ

Update: 2020-01-09 15:34 GMT

ಬೆಂಗಳೂರು, ಜ.9: ರಾಜ್ಯ ಹಜ್ ಸಮಿತಿಯ ಮುಖಾಂತರ 2020ನೇ ಸಾಲಿನ ಪವಿತ್ರ ಹಜ್‌ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳನ್ನು ಜ.10ರಂದು ಸಂಜೆ 4 ಗಂಟೆಗೆ ಹೆಗಡೆ ನಗರ ಸಮೀಪದ ತಿರುಮೇನಹಳ್ಳಿಯಲ್ಲಿರುವ ಹಜ್ ಭವನದಲ್ಲಿ ಆನ್‌ಲೈನ್ ಖುರ್ರಾ(ಲಾಟರಿ) ಮೂಲಕ ಆಯ್ಕೆ ಮಾಡುವ ಪ್ರಕ್ರಿಯೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸಚಿವ ಪ್ರಭು ಚವ್ಹಾಣ್, ಕಾರ್ಯದರ್ಶಿ ಇಬ್ರಾಹಿಮ್ ಅಡೂರ್, ರಾಜ್ಯ ಹಜ್ ಸಮಿತಿಯ ಅಧ್ಯಕ್ಷ ಆರ್.ರೋಷನ್ ಬೇಗ್, ಕಾರ್ಯನಿರ್ವಾಹಕ ಅಧಿಕಾರಿ ಸರ್ಫರಾಝ್ ಖಾನ್ ಸರ್ದಾರ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News