ಶೃಂಗೇರಿ: ಕನ್ನಡ ಸಾಹಿತ್ಯ ಸಮ್ಮೇಳನದ ವಿರುದ್ಧ ಸಂಘ ಪರಿವಾರದ ಪ್ರತಿಭಟನೆ; ಹಲವರು ಪೊಲೀಸ್ ವಶಕ್ಕೆ

Update: 2020-01-10 09:00 GMT

ಚಿಕ್ಕಮಗಳೂರು, ಜ.10: ಶೃಂಗೇರಿ ಪಟ್ಟಣದ ಆದಿಚುಂಚನಗಿರಿ ಸಭಾಭವನದ ಪೂರ್ಣಚಂದ್ರ ತೇಜಸ್ವಿ ವೇದಿಕೆಯಲ್ಲಿ ಚಿಕ್ಕಮಗಳೂರು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಳ್ಳುತ್ತಿದ್ದಂತೆ ವೇದಿಕೆಯ ಹೊರಭಾಗದಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಮ್ಮೇಳನದ ವೇದಿಕೆಯ ದ್ವಾರದ ಬಳಿ ಜಮಾಯಿಸಿದ ಸುಮಾರು 15ರಷ್ಟು ಸಂಘ ಪರಿವಾರದ ಕಾರ್ಯಕರ್ತರು ಸಮ್ಮೇಳನದ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪರಿಸ್ಥಿತಿ ತಿಳಿಗೊಳಿಸಿದರು.

ಇದೀಗ ಎರಡನೇ ಬಾರಿ ಸಂಘ ಪರಿವಾರದ ಕಾರ್ಯಕರ್ತರು ಸಮ್ಮೇಳನದ ವೇದಿಕೆಯೆದುರು ಜಮಾಯಿಸಿದರು. 'ಜೈ ಶ್ರೀರಾಮ್‌ ' ಮತ್ತು ವಿಠಲ ಹೆಗ್ಡೆ ವಿರುದ್ಧ ಘೋಷಣೆ ಕೂಗುತ್ತಾ ಕಾರ್ಯಕ್ರಮದ ಸಭಾಂಗಣಕ್ಕೆ ನುಗ್ಗಲು ಯತ್ನಿಸಿದರು. ಬಳಿಕ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು. ಪ್ರತಿಭಟನೆ ನಡೆಸುತ್ತಿದ್ದಾರೆ. ಅವರನ್ನೂ ಪೊಲೀಸರು ವಶಕ್ಕೆ ಪಡೆದರು.

ಸ್ಥಳದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಕ್ಕಂ ಹೂಡಿದ್ದಾರೆ. ವಿರೋಧದ ನಡುವೆಯೂ ಸಮ್ಮೇಳನ ಮುಂದುವರಿದಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News