×
Ad

ದ.ಕ. ಜಿಲ್ಲಾ ಕರಾವಳಿ ಉತ್ಸವಕ್ಕೆ ಚಾಲನೆ

Update: 2020-01-10 16:34 IST

ಮಂಗಳೂರು, ಜ.10: ದ.ಕ. ಜಿಲ್ಲಾ ಕರಾವಳಿ ಉತ್ಸವದ ಸಾಂಸ್ಕೃತಿಕ ಮೆರವಣಿಗೆಗೆ ನಗರದ ನೆಹರೂ ಮೈದಾನದಲ್ಲಿ ಮುಜರಾಯಿ, ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಸಂಜೆ ಚಾಲನೆ ನೀಡಿದರು.

ಸಮಾರಂಭದಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಶಾಸಕ ವೇದವ್ಯಾಸ ಕಾಮತ್, ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮನಪಾ ಆಯುಕ್ತ ಅಜಿತ್‌ ಕುಮಾರ್ ಹೆಗಡೆ, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್‌ ಕುಮಾರ್ ಕಲ್ಕೂರ, ತಹಶೀಲ್ದಾರ್ ಗುರುಪ್ರಸಾದ್, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ತುಳು ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲ್‌ ಸಾರ್, ಬ್ಯಾರಿ ಅಕಾಡಮಿ ಅಧ್ಯಕ್ಷ ರಹೀಂ ಉಚ್ಚಿಲ್, ಮದನಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಮೆರವಣಿಗೆಯು ಆಕರ್ಷಕ ಚೆಂಡೆ ವಾದ್ಯದೊಂದಿಗೆ ಆರಂಭವಾಯಿತು. ಸಾಂಸ್ಕೃತಿಕ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 28 ಕಲಾ ತಂಡಗಳಿಂದ ವೈವಿಧ್ಯಮಯ ಕಲಾ ಪ್ರದರ್ಶನ ನಡೆಯುತ್ತಿದೆ. ನಗರದ ಜನತೆಗೆ ವಿವಿಧ ಕಲಾ ಪ್ರಕಾರಗಳನ್ನು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಕಣ್ತುಂಬಿಕೊಳ್ಳುತ್ತಿದ್ದಾರೆ. ಯುವಜನ ಸಂಘಟನೆಗಳು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ತಂಡಗಳು ಈ ಮೆರವಣಿಗೆಯಲ್ಲಿ ಭಾಗವಹಿಸಿವೆ.

ನಗರದ ನೆಹರೂ ಮೈದಾನದಿಂದ ಹೊರಟ ವಿಜೃಂಭಣೆಯ ಜನಪದ ಸಾಂಸ್ಕೃತಿಕ ಮೆರವಣಿಗೆಯು ಕೆ.ಎಸ್. ರಾವ್ ರಸ್ತೆ, ನವಭಾರತ್ ವೃತ್ತ, ಪಿವಿಎಸ್, ಲಾಲ್‌ಭಾಗ್ ಮೂಲಕ ಕರಾವಳಿ ಉತ್ಸವ ಮೈದಾನ ತಲುಪಲಿದೆ. ಸಂಜೆ 5:30ಕ್ಕೆ ವಸ್ತುಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಸಂಜೆ 6 ಗಂಟೆಗೆ ಚಿತ್ರನಟ ರಿಷಬ್ ಶೆಟ್ಟಿ ಕರಾವಳಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News