ಜ.13: ಉಡುಪಿ ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರ ಪ್ರವಾಸ
Update: 2020-01-10 19:42 IST
ಉಡುಪಿ, ಜ.10: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ, ಸಕಾಲ ಹಾಗೂ ಕಾರ್ಮಿಕ ಸಚಿವ ಎಸ್.ಸುರೇಶ್ ಕುಮಾರ್ ಜ.13ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸೋಮವಾರ ಬೆಳಗ್ಗೆ ಮಂಗಳೂರಿನಿಂದ ಆಗಮಿಸುವ ಸಚಿವರು, ಬೆಳಗ್ಗೆ 10:30ಕ್ಕೆ ಕೋಟ ಪಡುಕೆರೆಯಲ್ಲಿ ಸರಕಾರಿ ಶಾಲೆಗಳ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳುವರು.