×
Ad

ಬಂಟ್ವಾಳ: ಪೌರತ್ವ ತಿದ್ದುಪಡಿ ಕಾಯ್ದೆ ಸಮರ್ಥನಾ ಸಮಲೋಚನಾ ಸಭೆ

Update: 2020-01-10 20:06 IST

ಬಂಟ್ವಾಳ, ಜ. 10: ರಾಷ್ಟ್ರ ಜಾಗರಣ ಸಮಿತಿ ನೇತೃತ್ವದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ  2019 ಸಮರ್ಥನಾ ಸಮಲೋಚನಾ ಸಭೆಯು ಶುಕ್ರವಾರ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಜರಗಿತು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ದೇಶದ ಅಭಿವೃದ್ಧಿ ಮತ್ತು ಸಮಗ್ರತೆಗೆ ಪೂರಕವಾದ ಕಾಯ್ದೆಯಾಗಿರುವುದರಿಂದ ಜನತೆ ಬೆಂಬಲ ನೀಡಬೇಕೆಂದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಜ. 19ರಂದು ಮಂಗಳೂರು ಕುಳೂರಿನ ಸಿಟಿ ಮೈದಾನದಲ್ಲಿ ಸಮರ್ಥನಾ ಸಭೆಗೆ ಬಂಟ್ವಾಳ ಕ್ಷೇತ್ರದಿಂದ ಸುಮಾರು 25 ಸಾವಿರ ಜನರು ಭಾಗವಹಿಸುವರು ಎಂದರು.

ಸಭೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಸಂಪರ್ಕ ಪ್ರಮುಖ್ ರವೀಂದ್ರ, ಅಭಿಯಾನ ಪ್ರಮುಖ್ ಸುಧೀರ್ ಶೆಟ್ಟಿ ಕಣ್ಣೂರು ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಸುಲೋಚನಾ ಜಿ.ಕೆ ಭಟ್, ಹರಿಕೃಷ್ಣ ಬಂಟ್ವಾಳ, ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು.

ರಾಮದಾಸ್ ಬಂಟ್ವಾಳ ಸ್ವಾಗತಿಸಿ, ದೇವಪ್ಪ ಪೂಜಾರಿ ವಂದಿಸಿದರು. ಮೋನಪ್ಪ ದೇವಸ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News