28ನೇ ದಿನ ಪ್ರವೇಶಿಸಿದ ಶಾಹೀನ್‌ಭಾಗ್ ಪ್ರತಿಭಟನೆ

Update: 2020-01-10 16:45 GMT

ಹೊಸದಿಲ್ಲಿ,ಜ. 10: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ವಿರೋಧಿಸಿ ದಿಲ್ಲಿಯ ಶಾಹೀನ್‌ಭಾಗ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ 26ನೇ ದಿನಕ್ಕೆ ಕಾಲಿರಿಸಿದೆ. ಪ್ರತಿಭಟನೆಯನ್ನು ಕೈಬಿಡುವಂತೆ ಇಲ್ಲವೇ ಬೇರೆಡೆಗೆ ಸ್ಥಳಾಂತರಗೊಳ್ಳಬೇಕೆಂಬ ಪೊಲೀಸರ ಮನವಿಗೆ ಕಿವಿಗೊಡದ ಪ್ರತಿಭಟನಕಾರರು ತಮ್ಮ ಧರಣಿಯನ್ನು ಮುಂದುವರಿಸಿದ್ದಾರೆ.

ಪ್ರತಿಭಟನೆಯಲ್ಲಿ 200ಕ್ಕೂ ಅಧಿಕ ಮಂದಿ ಮಹಿಳೆಯರು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದಾರೆ. ಪ್ರತಿಭಟನಕಾರರಿಗೆ ಬೆಂಬಲ ವ್ಯಕ್ತಪಡಿಸಿ ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಭಾರೀ ಸಂಖ್ಯೆಯ ಜನರು ಕೂಡಾ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

  ‘‘ ಶಾಹೀನ್‌ಭಾಗ್‌ನಲ್ಲಿ ನಡೆಯುತ್ತಿರುವ ಧರಣಿಯಿಂದಾಗಿ ಡಿಸೆಂಬರ್ 14ರಿಂದೀಚೆಗೆ ನೊಯ್ಡಿ ಹಾಗೂ ದಕ್ಷಿಣ ದಿಲ್ಲಿಯನ್ನು ಸಂಪರ್ಕಿಸುವ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಈ ಧರಣಿಯನ್ನು ಕೊನೆಗೊಳಿಸುವಂತೆ ಕೋರಿ ನಾವು ಸ್ಥಳೀಯ ಪ್ರಭಾವಿ ನಾಯಕರು ಹಾಗೂ ಧಾರ್ಮಿಕ ಮುಖಂಡರ ಜೊತೆ ಕಳೆದ ಐದು ದಿನಗಳಿಂದ ಮಾತುಕತೆ ನಡೆಸಿದ್ದೇವೆ’’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News