ಬಾಲಕಿಯ ಮಾನಭಂಗ ಯತ್ನ ಆರೋಪ: ಪ್ರಕರಣ ದಾಖಲು
Update: 2020-01-10 22:57 IST
ಉಪ್ಪಿನಂಗಡಿ : ಶಾಲೆಯಿಂದ ಮನೆಗೆ ಹೋಗುತ್ತಿದ್ದ ನಾಲ್ಕನೇ ತರಗತಿಯ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕಾಯರಡ್ಕ ಎಂಬಲ್ಲಿ ನಡೆದಿದ್ದು, ಪೋಕ್ಸೋ ಹಾಗೂ ದಲಿತ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉರುವಾಲು ಗ್ರಾಮದ ಕಾಯರಡ್ಕ ಮನೆ ನಿವಾಸಿ ಸಿದ್ದಿಕ್ (19) ಎಂಬಾತ ಆರೋಪಿಯಾಗಿದ್ದು, ಈತ ಶಾಲೆಯಿಂದ ಮನೆಗೆ ತೆರಳುತ್ತಿದ್ದ 9 ವರ್ಷದ ಬಾಲಕಿಗೆ ಕಿರುಕುಳ ನೀಡಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಉಪ್ಪಿನಂಗಡಿ ಪೊಲೀಸರು ಆರೋಪಿ ಸಿದ್ದಿಕ್ ವಿರುದ್ದ ದಲಿತ ದೌರ್ಜನ್ಯ ತಡೆ ಕಾಯಿದೆ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.