ಲೋಕಾಯುಕ್ತ ಹಲ್ಲಿಲ್ಲದ ಹಾವಿನಂತಾಗಿದೆ: ಹೈಕೋರ್ಟ್‌ಗೆ ಹೇಳಿಕೆ

Update: 2020-01-10 18:05 GMT

ಬೆಂಗಳೂರು, ಜ.10: ಲೋಕಾಯುಕ್ತವನ್ನು ದುರ್ಬಲಗೊಳಿಸಿದ ಮೇಲೆ ಅಧಿಕಾರಿಗಳು ದುರ್ಬಲವಾಗಿದ್ದಾರೆ. ಆದರೆ, ಸರಕಾರ ಲೋಕಾಯುಕ್ತ ದುರ್ಬಲವಾಗಿಲ್ಲ ಎಂಬ ಹೇಳಿಕೆ ಒಪ್ಪಲು ಸಾಧ್ಯವಿಲ್ಲ ಎಂದು ಲೋಕಾಯುಕ್ತ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಹೈಕೋರ್ಟ್ ಪೀಠಕ್ಕೆ ತಿಳಿಸಿದರು.

ಎಸಿಬಿಯ ಸಂವಿಧಾನದ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಅರವಿಂದ್‌ ಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಲೋಕಾಯುಕ್ತದ ತನಿಖಾಧಿಕಾರವನ್ನು ಕಿತ್ತುಕೊಂಡ ಕಾರಣ ಲೋಕಾಯುಕ್ತ ಹಲ್ಲಿಲ್ಲದ ಹಾವಿನಂತಾಗಿದೆ. ಇದರಿಂದ, ಭಷ್ಟಾಚಾರ ತಡೆ ಅಸಾಧ್ಯವಾಗಿದೆ ಎಂದು ಅಶೋಕ್ ಹಾರನಹಳ್ಳಿ ಅವರು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News