ಮುಂದಿನ ಶೈಕ್ಷಣಿಕ ವರ್ಷದಿಂದ 'ಬ್ಯಾಗ್ ರಹಿತ ದಿನ': ಶಿಕ್ಷಣ ಸಚಿವ ಸುರೇಶ್ ಕುಮಾರ್

Update: 2020-01-11 13:06 GMT

ಬೆಂಗಳೂರು, ಜ. 11: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದ ಎಲ್ಲ ಶಾಲೆಗಳಲ್ಲಿ ವಾರಕ್ಕೊಂದು ದಿನ ಬ್ಯಾಗ್ ರಹಿತ ದಿನ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. 

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಬ್ಯಾಗ್ ರಹಿತ ದಿನ ಜಾರಿಗೆ ತರಲು ರಾಜ್ಯ ಸರಕಾರ ಮುಂದಾಗಿದೆ. ಈ ಸಂಬಂಧ ಶಿಕ್ಷಣ ತಜ್ಞರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ವಾರದಲ್ಲಿ ಒಂದು ದಿನ ಅಥವಾ 15 ದಿನಗಳಿಗೊಮ್ಮೆ ವಿದ್ಯಾರ್ಥಿಗಳಿಗೆ ಬ್ಯಾಗ್ ರಹಿತ ದಿನ ಮಾಡಲಾಗುವುದು ಎಂದು ತಿಳಿಸಿದರು.

ಈ ಬ್ಯಾಗ್ ರಹಿತ ದಿನದಂದು ನಾಟಕ, ಸ್ವಚ್ಛತೆ, ಹಾಡುಗಾರಿಕೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತದೆ. ಶಾಲಾ ಮಕ್ಕಳ ಬ್ಯಾಗ್ ತೂಕವನ್ನು ಕಡಿಮೆ ಮಾಡುವ ಬಗ್ಗೆಯೂ ಚಿಂತನೆ ನಡೆಸಲಾಗಿದ್ದು, ಈ ಸಂಬಂಧ ಶೀಘ್ರದಲ್ಲಿ ಶಿಕ್ಷಣ ತಜ್ಞರ ಜತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News