'ಎಪ್ರಿಲ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ' ಬಗ್ಗೆ ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ

Update: 2020-01-11 15:46 GMT
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಆದೇಶ ಪತ್ರ

ಬೆಂಗಳೂರು, ಜ.11: '2020ನೇ ಸಾಲಿನಲ್ಲಿ ಗ್ರಾಮ ಪಂಚಾಯತ್ ಗಳ ಸಾರ್ವತ್ರಿಕ ಚುನಾವಣೆಯನ್ನು ಎಪ್ರಿಲ್ 5 ಮತ್ತು 9ಕ್ಕೆ ನಡೆಸಲಾಗುತ್ತಿದೆ, ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರೌಢ ಶಿಕ್ಷಣದಲ್ಲಿ ಉತ್ತೀರ್ಣರಾಗಿರಬೇಕು, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್‌ಗಳನ್ನು ಕರ್ನಾಟಕದಲ್ಲಿ ಹೊಂದಿರಬೇಕೆಂಬ' ವಿವಿಧ ಮಾಹಿತಿಗಳನ್ನು ನಮೂದಿಸಿ, ರಾಜ್ಯ ಚುನಾವಣಾ ಆಯೋಗವು ಆದೇಶಿದೆ ಎಂಬ ಅರ್ಥದಲ್ಲಿ ನಕಲಿ ರಾಜ್ಯ ಪತ್ರವನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ರಾಜ್ಯ ಚುನಾವಣಾ ಆಯೋಗದ ಗಮನಕ್ಕೆ ಬಂದಿದೆ.

ಆಯೋಗವು ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ಸಂಬಂಧದಲ್ಲಿ ಇದುವರೆಗೆ ಯಾವುದೇ ದಿನಾಂಕವನ್ನು ಗೊತ್ತುಪಡಿಸಿರುವುದಿಲ್ಲ ಹಾಗೂ ಇಂತಿಷ್ಟೆ ಶಿಕ್ಷಣವನ್ನು ಹೊಂದಿರಬೇಕು ಹಾಗೂ ಇಂತಿಷ್ಟೇ ಮಕ್ಕಳನ್ನು ಹೊಂದಿರಬೇಕು ಎಂಬ ಬಗ್ಗೆ ಯಾವುದೇ ಆದೇಶವನ್ನು ಹೊರಡಿಸಿರುವುದಿಲ್ಲ. ಆದುದರಿಂದ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ರಾಜ್ಯ ಚುನಾವಣಾ ಆಯೋಗದ ಹೆಸರಿನಲ್ಲಿರುವ ಆದೇಶವು ನಕಲಿಯಾಗಿದೆ ಎಂದು ಆಯೋಗದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News