ನಾಚಿಕೆ ಆಗಬೇಕು ನಿಮಗೆ...: ಡಿಸಿಎಂ ಅಶ್ವತ್ ನಾರಾಯಣ ವಿರುದ್ಧ ಎಚ್‌ಡಿಕೆ ಕಿಡಿ

Update: 2020-01-11 17:09 GMT

ಬೆಂಗಳೂರು, ಜ.11: ರಾಜ್ಯದಲ್ಲಿ ಉದ್ಯೋಗಕ್ಕೆ ಬರವಿಲ್ಲ. ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ನೀಡಿರುವ ಹೇಳಿಕೆ ಬೌದ್ಧಿಕ ದಿವಾಳಿತನದಿಂದ ಕೂಡಿದೆ. ಪಕೋಡ ತಯಾರಿಸಲು ಕೂಡ ಈರುಳ್ಳಿ ಕೊಳ್ಳಲೂ ಆರ್ಥಿಕವಾಗಿ ನಿಶಕ್ತರಾಗಿರುವ ನಿರುದ್ಯೋಗಿಗಳ ಕಣ್ಣಲ್ಲೇಕೆ ನೀರು ತರಿಸುವಿರಿ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವಿಟರ್‌ನಲ್ಲಿ ಕಿಡಿಕಾರಿದ್ದಾರೆ.

ರಾಜ್ಯ ಸೇರಿದಂತೆ ದೇಶದಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ. ಹೊಸ ಉದ್ಯೋಗ ಸೃಷ್ಟಿ ಒತ್ತಟ್ಟಿಗಿರಲಿ, ಇರುವ ಉದ್ಯೋಗ ಕಳೆದುಕೊಂಡು ಉದ್ಯೋಗಸ್ಥರು ಬೀದಿಗೆ ಬಿದ್ದಿದ್ದಾರೆ. ಉದ್ಯೋಗಾಕಾಂಕ್ಷಿಗಳು ಕಂಗಾಲಾಗಿದ್ದಾರೆ. ಇಂತಹ ಹಸಿ ಸುಳ್ಳುಗಳನ್ನು ಯಾರನ್ನು ಮೆಚ್ಚಿಸಲು ಹೇಳುತ್ತೀರಿ? ನಾಚಿಕೆ ಆಗಬೇಕು ನಿಮಗೆ. ಯೋಗ್ಯ ಉದ್ಯೋಗಾಕಾಂಕ್ಷಿಗಳನ್ನು ನಿಮ್ಮ ಮನೆಗೆ ಕಳುಹಿಸಲೇ? ಕಚೇರಿಗೆ ಕಳುಹಿಸಲೇ? ಕೆಲಸ ಕೊಡಿಸುತ್ತೀರಾ? ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News