×
Ad

ದ.ಕ. ಜಿಲ್ಲಾ ಬಿಜೆಪಿಗೆ ನೂತನ ಅಧ್ಯಕ್ಷರ ನೇಮಕ

Update: 2020-01-12 11:43 IST

ಮಂಗಳೂರು, ಜ.12: ದ.ಕ. ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಸುದರ್ಶನ್‌ಮೂಡುಬಿದಿರೆ ಚುನಾಯಿತರಾಗಿದ್ದಾರೆ.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸುದರ್ಶನ್ ಈ ಹಿಂದೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.  45 ವರ್ಷ ಹರೆಯದ ಸುದರ್ಶನ್ ಮುಂದಿನ ಮೂರು ವರ್ಷಗಳ ಕಾಲ ಅಧಿಕಾರದ ಹುದ್ದೆಯನ್ನು ನಿಭಾಯಿಸಲಿದ್ದಾರೆ.

ಬಿಜೆಪಿ ಹಾಲಿ ಜಿಲ್ಲಾಧ್ಯಕ್ಷರಾಗಿದ್ದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಅವಧಿಯು 2019 ಸೆಪ್ಟಂಬರ್ ತಿಂಗಳಲ್ಲಿ ಮುಗಿದಿತ್ತು. ಈ ಹಿನ್ನೆಲೆಯಲ್ಲಿ ಇಂದು ಚುನಾವಣೆ ನಿಗದಿಯಾಗಿತ್ತು. ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುವರ್ಣ ಚುನಾವಣಾ ವೀಕ್ಷಕರಾಗಿ ಕಾರ್ಯನಿರ್ವಹಿಸಿದರು. 

ಪಕ್ಷದ ನೂತನ ಜಿಲ್ಲಾಧ್ಯಕ್ಷ ಸುದರ್ಶನ್‌ರನ್ನು ಅಭಿನಂದಿಸಿರುವ ಶಾಸಕ ವೇದವ್ಯಾಸ ಕಾಮತ್, ನಿಮ್ಮ ಅವಧಿಯಲ್ಲಿ ಪಕ್ಷವು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಹಾರೈಸಿದ್ದಾರೆ.

ಪಕ್ಷದ ಎಂಟು ಮಂಡಲಗಳ ಅಧ್ಯಕ್ಷರು, ಶಾಸಕರಾದ ಭರತ್ ಶೆಟ್ಟಿ, ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಸಂಜೀವ ಮಠಂದೂರು ಭಾಗಿಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News