ಮಂಗಳೂರು ಗೋಲಿಬಾರ್ ಪ್ರಕರಣ: ಮಾಜಿ ಮೇಯರ್ ಅಶ್ರಫ್‌ರಿಂದ ಮಾನವ ಹಕ್ಕು ಆಯೋಗಕ್ಕೆ ದೂರು
Update: 2020-01-12 13:09 IST
ಮಂಗಳೂರು, ಜ.12: ನಗರದಲ್ಲಿ ಇತ್ತೀಚೆಗೆ ನಡೆದ ಪೊಲೀಸ್ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮೇಯರ್ ಅಶ್ರಫ್ ಅವರು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದಾರೆ.
ಜ.10ರಂದು ಬೆಂಗಳೂರಿನಲ್ಲಿ ರಾಜ್ಯ ಮಾನವ ಹಕ್ಕು ಆಯೋಗವನ್ನು ಸಂಪರ್ಕಿಸಿದ ಅಶ್ರಫ್ ಅವರು, ಮಂಗಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರ ಹಾಗೂ ಗಾಯಗೊಂಡವರ ವಿವರ, ಸುಮಾರು 380 ಪುಟಗಳನ್ನೊಳಗೊಂಡ ಘಟನೆಯ ಮಾಹಿತಿ, ಸಿಡಿ, ಫೋಟೊ, ಅಮಾಯಕರ ಮೇಲೆ ಪ್ರಕರಣ ದಾಖಲು ಇತ್ಯಾದಿ ವಿವರಗಳನ್ನು ಸಲ್ಲಿಸಿದ್ದಾರೆ.
ಈ ಸಂಧರ್ಭ ವಕೀಲ ಲತೀಫ್ ಮತ್ತು ಇತರರು ಉಪಸ್ಥಿತರಿದ್ದರು.