ಉಪ್ಪೂರು: ಎನ್ನೆಸೆಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಉಡುಪಿ, ಜ.12: ಅನುಕೂಲತೆಗಳ ಮಹತ್ವ ಗೊತ್ತಾಗಬೇಕಾದರೆ ಅನು ಕೂಲಗಳಿರಬಾರದು. ಆ ಅನುಕೂಲಗಳನ್ನು ಮಾಡಿಕೊಡಬೇಕು. ಅಂತಹ ಜಾಗವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನುಕೂಲತೆಗಳು ಇಲ್ಲದಾಗ ಅದಕ್ಕೆ ಹೊಂದಿಕೊಂಡು ಹೋಗುವ ವಾತಾವರಣ ಕಲ್ಪಿಸುವುದೇ ಎನ್ನೆಸೆಸ್ ಶಿಬಿರದ ಉದ್ದೇಶ ಎಂದು ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಕೊಳಲಗಿರಿ ಉಪ್ಪೂರು ಸರಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2019-20ನೇ ಶೈಕ್ಷಣಿಕ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಸಂಧ್ಯಾ ಕಾಲೇಜಿನ ಕಾರ್ಯದರ್ಶಿ ಪ್ರದೀಪ್ ಕುಮಾರ್, ನ್ಯಾಯವಾದಿ ಕೃಷ್ಣರಾಜ್ ಶೆಟ್ಟಿ, ಸರಕಾರಿ ಪ್ರೌಢ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ರಾಜು ಪೂಜಾರಿ, ಉಪ್ಪೂರು ಗ್ರಾಪಂ ಸದಸ್ಯ ಗಣೇಶ್ ಪೂಜಾರಿ, ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ಅಧ್ಯಕ್ಷ ಕೃಷ್ಣ ಆಚಾರ್, ಪ್ರೌಢ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ರಾಜೀವ ಶೆಟ್ಟಿ, ಉದ್ಯಮಿ ರತ್ನಾಕರ ಶೆಟ್ಟಿ, ಎನ್ನೆಸೆಸ್ ಮುಖಂಡರಾದ ಪನ್ನಗ ನಾವಡ, ದೀಕ್ಷಾ ಐತಾಳ್, ಮನೋಜ್ ಡಿ., ವಿಶ್ರುತ ವಿಜಯ್ ಉಸ್ಥಿತರಿದ್ದರು.
ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಡಾ.ಸುಕನ್ಯಾ ಮೇರಿ ಜೆ. ವಹಿಸಿದ್ದರು. ಎನ್‌ಎಸ್‌ಎಸ್ ಯೋಜನಾಧಿಕಾರಿ ರಮಾನಂದ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಮುಖಂಡ ವೆಂಕಟೇಶ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿ ದರು. ಯೋಜನಾಧಿಕಾರಿ ಶ್ರೀಲತಾ ಆಚಾರ್ಯ ವಂದಿಸಿದರು.