ಹಳೆ ವೈಷಮ್ಯ ಹಿನ್ನೆಲೆ: ರೌಡಿ ಶೀಟರ್ ಕೊಲೆ
Update: 2020-01-12 20:26 IST
ಬೆಂಗಳೂರು, ಜ.12: ಹಳೆ ವೈಷಮ್ಯದ ಹಿನ್ನೆಲೆ ರೌಡಿಶೀಟರ್‌ನೊರ್ವನನ್ನು ಕೊಲೆಗೈದಿರುವ ಘಟನೆ ಇಲ್ಲಿನ ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಸುಹೇಬ್ ಪಾಷಾ ಎಂದು ಪೊಲೀಸರು ಗುರುತಿಸಿದ್ದಾರೆ.
ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಗುಡ್ಡದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರವಿವಾರ ಮುಂಜಾನೆ ಪ್ರಕರಣ ಬೆಳಕಿಗೆ ಬಂದಿದೆ. ಸುದ್ದಿ ತಿಳಿದ ಜೆಜೆಆರ್ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.