×
Ad

ಜ.15ರ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ : ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಮನವಿ

Update: 2020-01-12 21:03 IST

ಮಂಗಳೂರು, ಜ.12: ಕೇಂದ್ರ ಸರಕಾರದ ವಿವಾದಾತ್ಮಕ ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯು ಜ.15ರಂದು ಅಡ್ಯಾರ್-ಕಣ್ಣೂರಿನಲ್ಲಿ ನಡೆಯಲಿದ್ದು, ಜಮಾಅತ್‌ಗೆ ಒಳಪಟ್ಟ ಎಲ್ಲರು ಭಾಗವಹಿಸಲು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಮನವಿ ಮಾಡಿದೆ.

ಈ ಬೃಹತ್ ಪ್ರತಿಭಟನಾ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಂಡು ಶಾಂತಿ ಮತ್ತು ಸೌಹಾರ್ದದಿಂದ ಸಮಾಜದ ಗೌರವ ಕಾಪಾಡಬೇಕು ಎಂದು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಯು.ಕೆ. ಮೋನು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News