ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಫೋಟ ಪ್ರಕರಣ: ಆರೋಪಿಗೆ 7 ವರ್ಷ ಶಿಕ್ಷೆ

Update: 2020-01-12 17:44 GMT
ಚಿನ್ನಸ್ವಾಮಿ ಕ್ರೀಡಾಂಗಣ 

ಬೆಂಗಳೂರು, ಜ.12: ದಶಕದ ಹಿಂದೆ ನಡೆದ ಚಿನ್ನಸ್ವಾಮಿ ಕ್ರೀಡಾಂಗಣ ಬಾಂಬ್ ಸ್ಫೋಟ ಪ್ರಕರಣದ 14ನೆ ಆರೋಪಿಗೆ ಎನ್‌ಐಎ ವಿಶೇಷ ಕೋರ್ಟ್ 7 ವರ್ಷ ಶಿಕ್ಷೆ ವಿಧಿಸಿ ಆದೇಶಿಸಿದೆ. 

ಬಿಹಾರ ರಾಜ್ಯದ ಆರೋಪಿ ಫಸೀ ಮುಹಮ್ಮದ್‌ಗೆ ಶಿಕ್ಷೆ ವಿಧಿಸಲಾಗಿದೆ. ಆರೋಪಿ ತನಿಖಾಧಿಕಾರಿಗಳ ವಿಚಾರಣೆ ವೇಳೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಕೋರ್ಟ್ ಆತನಿಗೆ 7 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿದೆ.

2010ರ ಎ.17ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮಂಬೈ ಇಂಡಿಯನ್ಸ್ ತಂಡಗಳ ನಡುವೆ ಪಿಐಎಲ್ ಕ್ರಿಕೆಟ್ ಪಂದ್ಯ ನಡೆದಿತ್ತು. ಪಂದ್ಯದ ಆರಂಭಕ್ಕೆ ಕೆಲವೇ ನಿಮಿಷಗಳ ಮೊದಲು ಬಾಂಬ್‌ಗಳು ಸ್ಫೋಟಗೊಂಡಿದ್ದವು. ಈ ಸಂಬಂಧ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಆನಂತರ ಎನ್‌ಐಎ ಅಧಿಕಾರಿಗಳು ಪ್ರತ್ಯೇಕ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News