ಸಚಿವ ಸಿ.ಟಿ.ರವಿಗೆ ಸಾಹಿತ್ಯ, ಸಂಸ್ಕೃತಿ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ: ದಲಿತ ಸಂಘರ್ಷ ಸಮಿತಿ

Update: 2020-01-12 18:20 GMT

ಬೆಂಗಳೂರು, ಜ.12: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡಲು ನಿರಾಕರಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿಗೆ ಕಲೆ, ಸಾಹಿತ್ಯ, ಸಂಸ್ಕೃತಿ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

ಕನ್ನಡ ಸಾಹಿತ್ಯ ಪರಿಷತ್ತು ಒಂದು ಸ್ವಾಯತ್ತ ಸಂಸ್ಥೆ. ಚಿಕ್ಕಮಗಳೂರು ಜಿಲ್ಲಾ ಸಾಹ್ಯಿತ ಸಮ್ಮೇಳನಾಧ್ಯಕ್ಷರಾಗಿ ಕಲ್ಕುಳಿ ವಿಠ್ಠಲ ಹೆಗ್ಡೆಯನ್ನು ಆಯ್ಕೆ ಮಾಡುವ ಹಕ್ಕು ಪರಿಷತ್ತಿಗೆ ಇದೆ. ಈ ವಿಷಯದಲ್ಲಿ ಜನಪ್ರತಿನಿಧಿಗಳು ಮೂಗು ತೂರಿಸುವ ಕೆಲಸ ಮಾಡಿರುವುದು ಸರಿಯಲ್ಲ ಎಂದು ಸಮಿತಿ ಆಕ್ಷೇಪಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಈ ರೀತಿಯ ವರ್ತನೆಗಳು ಮನು ಸಂಸ್ಕೃತಿಯು ಪ್ರತೀಕ. ಪ್ರಜಾಪ್ರಭುತ್ವ ವಿರೋಧಿ ನಿಲುವುಗಳನ್ನು ಮುಂದುವರಿಸಿದರೆ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆಸಬೇಕಾಗುತ್ತದೆ ಎಂದು ದಸಂಸ ರಾಜ್ಯ ಸಂಚಾಲಕ ಲಕ್ಷ್ಮಿನಾರಾಯಣ ನಾಗವಾರ ಪ್ರಕಟನೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News