ನ್ಯೂಝಿಲ್ಯಾಂಡ್ ಸರಣಿಗೆ ಟೆಸ್ಟ್ ತಂಡದಲ್ಲಿ ಸೈನಿಗೆ ಅವಕಾಶ ನಿರೀಕ್ಷೆ

Update: 2020-01-12 18:25 GMT

ಮುಂಬೈ, ಜ.12: ಇತ್ತೀಚೆಗೆ ಮುಕ್ತಾಯಗೊಂಡ ಶ್ರೀಲಂಕಾ ವಿರುದ್ಧ ಟ್ವೆಂಟಿ-20 ಸರಣಿಯಲ್ಲಿ ಕೇವಲ 46 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಕಬಳಿಸಿದ ದಿಲ್ಲಿಯ ವೇಗದ ಬೌಲರ್ ನವದೀಪ್ ಸೈನಿ ಮುಂಬರುವ ನ್ಯೂಝಿಲ್ಯಾಂಡ್ ಪ್ರವಾಸಕ್ಕಾಗಿ ಭಾರತದ ಟೆಸ್ಟ್ ತಂಡದಲ್ಲಿ ಸೇರ್ಪಡೆಗೊಳ್ಳಲಿದ್ದಾರೆ. ಜನವರಿ 24 ರಂದು ಆಕ್ಲೆಂಡ್‌ನಲ್ಲಿ ಮೊದಲ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದೊಂದಿಗೆ ಭಾರತ ಮತ್ತು ನ್ಯೂಝಿಲ್ಯಾಂಡ್ ಪ್ರವಾಸ ಸರಣಿ ಆರಂಭವಾಗಲಿದೆ. ಲಂಕಾ ಬ್ಯಾಟ್ಸ್ ಮನ್‌ಗಳನ್ನು ಸೈನಿ ಕಾಡಿದ್ದರು. ಸತತವಾಗಿ ಗಡಿಯಾರ ಹಾಕಿದರು. ಜೂನ್ 2018 ರಲ್ಲಿ ಅಫ್ಘಾನಿಸ್ತಾನ ವಿರುದ್ಧ ಏಕೈಕ ಟೆಸ್ಟ್ ನಲ್ಲಿ ಅವರು ಮುಹಮ್ಮದ್ ಶಮಿ ಫಿಟ್ನೆಸ್ ಪರೀಕ್ಷೆಯಲ್ಲಿ ವೈಫಲ್ಯ ಅನುಭವಿಸಿದಾಗ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್‌ಗೆ ಸೈನಿ ಅವಕಾಶ ಪಡೆದರು. ಆದರೆ ಅಂತಿಮ ಇಲೆವೆನ್‌ನಲ್ಲಿ ಆಡಲು ಸಾಧ್ಯವಾಗಲಿಲ್ಲ. ವೇಗಿ ಭುವನೇಶ್ವರ್ ಕುಮಾರ್ ಗಾಯದಿಂದ ಚೇತರಿಸಿಕೊಳ್ಳುತ್ತಿರುವುದರಿಂದ ಮತ್ತು ಜಸ್‌ಪ್ರೀತ್ ಬುಮ್ರಾ ಅವರು ಗಾಯದಿಂದ ಚೇತರಿಸಿಕೊಂಡು ಈಗಷ್ಟೇ ವಾಪಸಾಗುತ್ತಿರುವ ಹಿನ್ನೆಲೆಯಲ್ಲಿ ಸೈನಿಗೆ ಅವಕಾಶ ದೊರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಗೆ ವಿಶ್ರಾಂತಿ ಪಡೆದ ರೋಹಿತ್ ಶರ್ಮಾ ಮತ್ತು ಶಮಿ ಟ್ವೆಂಟಿ-20 ಕ್ರಿಕೆಟ್‌ಗೆ ಮರಳಲು ಸಜ್ಜಾ ಗುತ್ತಿದ್ದಾರೆ. ಭಾರತವು ನ್ಯೂಝಿಲ್ಯಾಂಡ್ ವಿರುದ್ಧ ಐದು ಟ್ವೆಂಟಿ-20, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಫೆಬ್ರವರಿಯಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಆಯ್ಕೆದಾರರು ಒಂದೇ ತಂಡವನ್ನು ಆಯ್ಕೆ ಮಾಡುವ ನಿರೀಕ್ಷೆಯಿದೆ. ಇದು ಮೂರು ಪಂದ್ಯಗಳ ಏಕದಿನ ಪಂದ್ಯವನ್ನು ಆಡಲು ಹೆಸರಿಸಲಾಗಿದೆ. ತವರಿನಲ್ಲಿ ಆಸ್ಟ್ರೇಲಿಯ ವಿರುದ್ಧದ ಸರಣಿಗೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಫಿಟ್ನೆಸ್ ಬಗ್ಗೆ ಅನುಮಾನ ಇರುವುದರಿಂದ ಶಿವಮ್ ದುಬೆ ಸೀಮಿತ ಓವರ್‌ಗಳ ತಂಡದಲ್ಲಿ ಮುಂದುವರಿಯಬಹುದು. ಭುಜದ ನೋವಿನಿಂದ ಬಳಲುತ್ತಿರುವ ಓಪನರ್ ಪೃಥ್ವಿ ಶಾ ಅವರು ಅಭ್ಯಾಸ ಪಂದ್ಯಗಳಿಂದ ಹೊರಗುಳಿದಿದ್ದಾರೆ, ಅವರು ಫಿಟ್ ಆಗಿದ್ದರೆ ಟೆಸ್ಟ್ ತಂಡಕ್ಕೆ ಸೇರುವ ಸಾಧ್ಯತೆ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News