ಕೆಪಿಸಿಸಿ ಅಧ್ಯಕ್ಷ, ಸಿಎಲ್‌ಪಿ ನಾಯಕನ ಆಯ್ಕೆ ವಿಚಾರ: ಹೊಸದಿಲ್ಲಿಗೆ ತೆರಳಿದ ಸಿದ್ದರಾಮಯ್ಯ

Update: 2020-01-13 14:22 GMT

ಬೆಂಗಳೂರು, ಜ. 13: ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಸಂಬಂಧದ ಚರ್ಚೆಗೆ ವರಿಷ್ಠರ ಆಹ್ವಾನದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಸಂಜೆ ಹೊಸದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ.

ಸೋಮವಾರ(ಜ.13) ಸಂಜೆ ಇಲ್ಲಿನ ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಿಲ್ಲಿಗೆ ಪ್ರಯಾಣ ಬೆಳೆಸಿದರು. ಎರಡು-ಮೂರು ದಿನಗಳಲ್ಲಿ ಕೆಪಿಸಿಸಿಗೆ ಹೊಸ ಸಾರಥಿ-ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಉಪ ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿದ್ದರು. ಆದರೆ, ಉಭಯ ನಾಯಕರ ರಾಜೀನಾಮೆಯನ್ನು ಅಂಗೀಕರಿಸಿರಲಿಲ್ಲ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡುವ ನಿರೀಕ್ಷೆ ಇದೆ. ಆದರೆ, ಶಾಸಕಾಂಗ ಪಕ್ಷದ ನಾಯಕನ ಸ್ಥಾನದಲ್ಲಿ ಸಿದ್ದರಾಮಯ್ಯನವರನೇ ಮುಂದುವರಿಸಲು ಹೈಕಮಾಂಡ್ ಒಲವು ಹೊಂದಿದ್ದು, ನಾಳೆ ಸಂಜೆ ವೇಳೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News