ಜ.20ರಂದು ಕಲ್ಯಾಣಪುರ ಗ್ರಾಪಂ ಕಚೇರಿ ಉದ್ಘಾಟನೆ
Update: 2020-01-13 20:55 IST
ಉಡುಪಿ, ಜ.13: ಜಿಪಂ ಉಡುಪಿ, ಉಡುಪಿ ತಾಪಂ, ಕಲ್ಯಾಣಪುರ ಗ್ರಾಪಂ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಲ್ಯಾಣಪುರ ಗ್ರಾಪಂ ಕಚೇರಿ ಕಟ್ಟಡದ ಉದ್ಘಾಟನೆ ಜ.20ರಂದು ಬೆಳಗ್ಗೆ 10:30ಕ್ಕೆ ನಡೆಯಲಿದೆ.
ಗ್ರಾಪಂ ಕಚೇರಿ ಕಟ್ಟಡವನ್ನು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಕಾರ್ಯಾಲಯ ವನ್ನು ರಾಜ್ಯ ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಬಾಪೂಜಿ ಸೇವಾ ಕೇಂದ್ರವನ್ನು ಉದ್ಘಾಟಿಸುವರು.
ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಗ್ರಾಮ ಕರಣಿಕರ ಕಚೇರಿಯನ್ನು ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಸಭಾಂಗಣವನ್ನು ಉದ್ಘಾಟಿಸಲಿರುವರು. ಕಲ್ಯಾಣಪುರ ಗ್ರಾಪಂ ಅಧ್ಯಕ್ಷೆ ಪುಷ್ಪ ಎಸ್. ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.