ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Update: 2020-01-13 16:38 GMT

ಕಾಪು, ಜ.13: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಇನ್ನಂಜೆ ಗ್ರಾಮದ ಕಲ್ಯಾಲು ರೈಲ್ವೆ ಸೇತುವೆ ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ನಡೆದಿದೆ.

ಮೃತರನ್ನು ಇನ್ನಂಜೆ ಕಲ್ಯಾಲು ನಿವಾಸಿ ವೇದವ್ಯಾಸ ರಾವ್(69) ಎಂದು ಗುರುತಿಸಲಾಗಿದೆ.

ಕೃಷಿ ಕೆಲಸ ಮಾಡಿಕೊಂಡಿದ್ದ ಇವರು, ಕಳೆದ 10 ವರ್ಷ ಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಜ.12ರಂದು ರಾತ್ರಿ ಮಲಗಿದ್ದವರು ಬೆಳಗ್ಗೆ ನೋಡುವಾಗ ನಾಪತ್ತೆಯಾಗಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News