ಜಯಕರ್ನಾಟಕದಿಂದ ಅಣ್ಣಪ್ಪ ಕುಲಾಲ್ ಉಚ್ಛಾಟನೆ
Update: 2020-01-13 22:15 IST
ಉಡುಪಿ, ಜ.13: ಜಯಕರ್ನಾಟಕ ಸಂಘಟನೆ ಸ್ಥಾಪಕ ಅಧ್ಯಕ್ಷ ಎನ್. ಮುತ್ತಪ್ಪ ರೈ ಅವರ ನಿರ್ದೇಶನದ ಮೇರೆಗೆ ರಾಜ್ಯಾಧ್ಯಕ್ಷ ಬಿ.ಎನ್. ಜಗದೀಶ್ ಅವರ ಆದೇಶದಂತೆ ಜಯಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರಾದ ಅಣ್ಣಪ್ಪ ಕುಲಾಲ್ ಹೆಬ್ರಿ ಇವರನ್ನು ಸಂಘಟನಾ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಕ್ಕಾಗಿ ಉಡುಪಿ ಜಿಲ್ಲಾ ಜಯಕರ್ನಾಟಕ ಸಮಿತಿಯಿಂದ ಉಚ್ಛಾಟಿಸಲಾಗಿದೆ.
ಇನ್ನು ಅವರ ಚಟುವಟಿಕೆಗಳಿಗೂ, ಸಂಘಟನೆಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.