ಜ.14: ಜಿಲ್ಲಾ ಯುವ ಸಮಾವೇಶ

Update: 2020-01-13 17:03 GMT

ಮಂಗಳೂರು, ಜ.13: ನೆಹರೂ ಯುವ ಕೇಂದ್ರ ಮಂಗಳೂರು ಹಾಗೂ ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ, ಭಾರತ್ ಸ್ಕೌಟ್‌ಗೈಡ್ಸ್ ಜಿಲ್ಲಾ ಸಂಸ್ಥೆ, ಜಿಲ್ಲಾ ಯುವಜನ ಒಕ್ಕೂಟದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 157ನೆ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಯುವ ಸಮಾವೇಶ ಜ.14ರಂದು ಬೆಳಗ್ಗೆ 10:30 ಗಂಟೆಗೆ ನಗರದ ಪುರಭವನದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಜಿಲ್ಲಾ ಯುವ ಮಂಡಲ ಪ್ರಶಸ್ತಿ ವಿತರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News