ವಿರಾಟ್ ಕೊಹ್ಲಿಗೆ ವಿಶ್ವ ದಾಖಲೆ ನಿರ್ಮಿಸಲು ಬೇಕಾಗಿದೆ ಇನ್ನೊಂದೇ ಶತಕ

Update: 2020-01-14 05:07 GMT

ಮುಂಬೈ, ಜ.14: ನಾಯಕನಾಗಿ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಗರಿಷ್ಠ ಅಂತರ್‌ರಾಷ್ಟ್ರೀಯ ಶತಕಗಳನ್ನು ಸಿಡಿಸಿ ವಿಶ್ವದಾಖಲೆ ನಿರ್ಮಿಸಲು ವಿರಾಟ್ ಕೊಹ್ಲಿಗೆ ಇನ್ನೊಂದೇ ಶತಕದ ಅಗತ್ಯವಿದೆ.

ಆಸ್ಟ್ರೇಲಿಯದ ಮಾಜಿ ನಾಯಕ ರಿಕಿ ಪಾಂಟಿಂಗ್ ಹೆಸರಲ್ಲಿ ಈ ವಿಶ್ವ ದಾಖಲೆ ಇದೆ. ಪಾಂಟಿಂಗ್ ನಾಯಕನಾಗಿ 41 ಶತಕಗಳನ್ನು ಸಿಡಿಸಿದ್ದಾರೆ. 2019ರ ನವೆಂಬರ್‌ನಲ್ಲಿ ಕೋಲ್ಕತಾದ ಈಡನ್‌ಗಾರ್ಡನ್ಸ್‌ನಲ್ಲಿ ಶತಕ ಸಿಡಿಸುವುದರೊಂದಿಗೆ ಪಾಂಟಿಂಗ್‌ರ ವಿಶ್ವ ದಾಖಲೆಯನ್ನು ಕೊಹ್ಲಿ ಸರಿದೂಗಿಸಿದ್ದರು.

ನಾಯಕನಾಗಿ 33 ಶತಕಗಳನ್ನು ಸಿಡಿಸಿರುವ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಗ್ರೇಮ್ ಸ್ಮಿತ್ ಮೂರನೇ ಸ್ಥಾನದಲ್ಲಿದ್ದಾರೆ.

ಮಂಗಳವಾರ ಮುಂಬೈನಲ್ಲಿ ನಡೆಯಲಿರುವ ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಕೊಹ್ಲಿಗೆ ವಿಶ್ವ ದಾಖಲೆ ನಿರ್ಮಿಸುವ ಅಪೂರ್ವ ಅವಕಾಶ ಒದಗಿಬಂದಿದೆ. ವಿರಾಟ್ ಕೊಹ್ಲಿ ನಾಯಕನಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ 20 ಶತಕಗಳನ್ನು ಸಿಡಿಸಿದರೆ, ಏಕದಿನ ಕ್ರಿಕೆಟ್‌ನಲ್ಲಿ ನಾಯಕನಾಗಿ 21 ಶತಕಗಳನ್ನು ಗಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News