ಉಡುಪಿ ಜಿಲ್ಲಾ ಮಟ್ಟದ ವೈಆರ್‌ಸಿ ಕಾರ್ಯಕ್ರಮದಲ್ಲಿ ತರಬೇತಿ

Update: 2020-01-14 15:01 GMT

ಉಡುಪಿ, ಜ.14: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳು ಹಾಗೂ ಪ್ರಾಂಶುಪಾಲರುಗಳಿಗೆ ಒಂದು ದಿನದ ತರಬೇತಿ ಶಿಬಿರವನ್ನು ಜ.16ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಅಜ್ಜರಕಾಡು ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ಜಿ.ಜಗದೀಶ್ ಉದ್ಘಾಟಿಸಲಿದ್ದು, ಮಂಗಳೂರು ವಿವಿಯ ರಿಜಿಸ್ಟ್ರಾರ್ ಪ್ರೊ.ಎ.ಎಂ.ಖಾನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ,ಕುಂದಾಪುರ ತಾಲೂಕು ಘಟಕದ ಸಭಾಪತಿ ಎಸ್.ಜಯಕರ ಶೆಟ್ಟಿ, ಕರ್ನಾಟಕ ರಾಜ್ಯ ಶಾಖೆ ಯುವ ರೆಡ್‌ಕ್ರಾಸ್ ಘಟಕದ ನಿರ್ದೇಶಕ ನಾಗಶೇಖರ್ ಎಸ್ ಮತ್ತು ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಬಾಸ್ಕರ್ ಶೆಟ್ಟಿ, ರೆಡ್‌ಕ್ರಾಸ್ ಉಪ ಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ, ಗೌರವ ಖಜಾಂಜಿ ಟಿ. ಚಂದ್ರಶೇಖರ್, ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ ಮತ್ತು ಉಡುಪಿ ಯುವ ರೆಡ್‌ಕ್ರಾಸ್ ಘಟಕದ ನಿರ್ದೇಶಕ ಜಯರಾಮ ಆಚಾರ್ಯ ಉಪಸ್ಥಿತರಿರುವರು.

ಅದೇ ದಿನ ಅಪರಾಹ್ನ 3:30ಕ್ಕೆ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರುಗಳ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಿವಿಯ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ವಹಿಸುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ಕಾಲೇಜು ಶಿಕ್ಷಣದ ಜಂಟಿ ನಿರ್ದೇಶಕ ಡಾ.ಎಸ್.ಬಿ. ಅಪ್ಪಾಜಿ ಗೌಡ, ಯುವ ರೆಡ್‌ಕ್ರಾಸ್ ಘಟಕದ ಎಲ್ಲಾ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಲಿರುವರು.

ಆದ್ದರಿಂದ ಜಿಲ್ಲೆಯ ಎಲ್ಲಾ ಕಾಲೇಜುಗಳ ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳು ಮತ್ತು ಕಾಲೇಜಿನ ಪ್ರಾಂಶುಪಾಲರುಗಳು ಹಾಜರಿದ್ದು, ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News