ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರ: ಸೋನಿಯಾ ಜತೆಗೆ ಸಿದ್ದರಾಮಯ್ಯ ಚರ್ಚೆ

Update: 2020-01-14 16:02 GMT

ಬೆಂಗಳೂರು, ಜ. 14: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನದ ವಿಚಾರ ಸಂಬಂಧ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಮಂಗಳವಾರ ಹೊಸದಿಲ್ಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಸುಮಾರು ಒಂದು ಗಂಟೆ ಕಾಲ ಕೆಪಿಸಿಸಿ ಅಧ್ಯಕ್ಷ ಸ್ಥಾನ, ಶಾಸಕಾಂಗ ಪಕ್ಷದ ನಾಯಕನ ಹುದ್ದೆ ಸೇರಿದಂತೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.

ಪಾಟೀಲ್ ಪರ ವಕಾಲತ್ತು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಹಾಗೂ ಲಿಂಗಾಯತ ಮುಖಂಡ ಎಂ.ಬಿ.ಪಾಟೀಲ್ ಅವರ ಹೆಸರನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ. ಎಂ.ಬಿ.ಪಾಟೀಲ್ ನೇಮಕದಿಂದ ಪಕ್ಷಕ್ಕೆ ಆಗುವ ಅನುಕೂಲಗಳ ಬಗ್ಗೆ ವಿವರಿಸಿದ್ದಾರೆಂದು ಹೇಳಲಾಗಿದೆ.

ಉತ್ತರ ಕರ್ನಾಟಕ ಭಾಗದ ಎಂ.ಬಿ.ಪಾಟೀಲ್ ಅಧ್ಯಕ್ಷರಾದರೆ ಲಿಂಗಾಯತ ಸಮುದಾಯದ ಬಿಎಸ್‌ವೈ ಅವರನ್ನು ಎದುರಿಸಲು ಸಹಕಾರಿ. ಹೀಗಾಗಿ ಪಾಟೀಲ್ ಅವರನ್ನು ಆಯ್ಕೆ ಮಾಡಬೇಕೆಂದು ಸಿದ್ದರಾಮಯ್ಯ ಕೋರಿದ್ದು, ನೀವು ಯಾವುದೇ ತೀರ್ಮಾನ ಕೈಗೊಂಡರೂ ಅದಕ್ಕೆ ಬದ್ಧ ಎಂದು ಸ್ಪಷ್ಟನೆ ನೀಡಿದ್ದಾರೆಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News