95 ಉಪನ್ಯಾಸಕರು ಪ್ರಾಂಶುಪಾಲ ಹುದ್ದೆಗೆ ಭಡ್ತಿ

Update: 2020-01-14 16:39 GMT

ಬೆಂಗಳೂರು, ಜ.14: ರಾಜ್ಯದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಉಪನ್ಯಾಸಕರಲ್ಲಿ ಸೇವಾ ಜ್ಯೇಷ್ಠತೆ ಆಧಾರದಲ್ಲಿ 95 ಮಂದಿಗೆ ಪ್ರಾಂಶುಪಾಲರಾಗಿ ಭಡ್ತಿ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕೌನ್ಸೆಲಿಂಗ್ ಮೂಲಕ ಸ್ಥಳ ನಿಯೋಜನೆ ನಡೆಯಲಿದೆ. ಸ್ಥಳ ನಿಯೋಜನೆಯಾದ ಏಳು ದಿನಗಳೊಳಗೆ ಕರ್ತವ್ಯಕ್ಕೆ ಹಾಜರಾಗಬೇಕು. ಈ ಬಗ್ಗೆ ಸಂಬಂಧಪಟ್ಟ ಉಪನಿರ್ದೇಶಕರಿಗೆ ವರದಿ ನೀಡಬೇಕು. ಹುದ್ದೆಗೆ ನಿಗದಿತ ದಿನದೊಳಗೆ ಹಾಜರಾಗದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ನಿರ್ದೇಶಕರು ಆದೇಶದಲ್ಲಿ ಹೇಳಿದ್ದಾರೆ.

ಬಿಇಒ, ಡಿಡಿಪಿಐಗಳಿಗೆ ಭಡ್ತಿ : ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿ, ಉಪ ನಿರ್ದೇಶಕರು ಹಾಗೂ ತತ್ಸಮಾನ ಹುದ್ದೆಗಳ ಕೆಲವು ಅಧಿಕಾರಿಗಳಿಗೆ ಭಡ್ತಿ ನೀಡಿ, ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲವು ಅಧಿಕಾರಿಗಳಿಗೆ ಉಪ ನಿರ್ದೇಶಕ ಹಾಗೂ ತತ್ಸಮಾನ ವೃಂದದ ಹುದ್ದೆಗೆ, ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆಲವು ಹಿರಿಯ ಅಧಿಕಾರಿಗಳನ್ನು ಜಂಟಿ ನಿರ್ದೇಶಕರ ಹುದ್ದೆಗೆ ಭಡ್ತಿ ನೀಡಲಾಗಿದೆ. ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News