×
Ad

ಕೆರೆ ಒತ್ತುವರಿ ತೆರವಿಗೆ ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ್ ಶೆಟ್ಟಿ ಸೂಚನೆ

Update: 2020-01-14 23:46 IST

ಬೆಂಗಳೂರು, ಜ.14: ಚಿಕ್ಕಬಾಣಾವರ ಹಾಗೂ ಮಲ್ಲಸಂದ್ರ ಕೆರೆಗಳ ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ಉತ್ತರ ತಹಸೀಲ್ದಾರ್‌ಗೆ ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ್ ಶೆಟ್ಟಿ ಸೂಚಿಸಿದ್ದಾರೆ.

ನಮ್ಮ ಬೆಂಗಳೂರು ಪ್ರತಿಷ್ಠಾನವು ಒತ್ತುವರಿ ಸಂಬಂಧ ಅರ್ಜಿ ಸಲ್ಲಿಸಿತ್ತು. ಇದನ್ನು ವಿಚಾರಣೆ ನಡೆಸಿದ್ದ ಲೋಕಾಯುಕ್ತರು ತಹಸೀಲ್ದಾರ್ ಗೈರು ಹಾಜರಿ ಹಾಗೂ ಒತ್ತುವರಿ ತೆರವು ಮಾಡದೇ ಇದ್ದಿದ್ದಕ್ಕೆ ಬೇಸರ ವ್ಯಕ್ತಪಡಿಸಿದರು.

ಚಿಕ್ಕಬಾಣಾವರ ಕೆರೆಗೆ 2021 ರ ವೇಳೆಗೆ ತ್ಯಾಜ್ಯ ನೀರು ಹೋಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಡಬ್ಲೂಎಸ್‌ಎಸ್‌ಬಿ ಅಧಿಕಾರಿಗಳು ಭರವಸೆ ನೀಡಿದರು. ಕೆರೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದಾಗಿ ಬಿಡಿಎ ಅಧಿಕಾರಿಗಳು ತಿಳಿಸಿದರು. 10 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮಲ್ಲಸಂದ್ರ ಕೆರೆ ಒತ್ತುವರಿಯನ್ನು 10 ದಿನಗಳೊಳಗೆ ತೆರವುಗೊಳಿಸಬೇಕು ಎಂದು ಲೋಕಾಯುಕ್ತರು ಸೂಚನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News