ಅಡ್ಯಾರ್ ಕಣ್ಣೂರ್ : ಸಿಎಎ ವಿರುದ್ಧ ಬೃಹತ್ ಪ್ರತಿಭಟನೆಗೆ ಚಾಲನೆ
ಮಂಗಳೂರು : ಕೇಂದ್ರ ಸರಕಾರದ ಸಿಎಎ, ಎನ್‌ಆರ್‌ಸಿಗಳಂತಹ ಸಂವಿಧಾನ ವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸಲು ಜಿಲ್ಲೆಯ 28 ಸಂಘಟನೆಗಳ ನೇತೃತ್ವದಲ್ಲಿ ದ.ಕ. ಮತ್ತು ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿಯು ಇಂದು ಮಧ್ಯಾಹ್ನ 2:30ಕ್ಕೆ ಅಡ್ಯಾರ್-ಕಣ್ಣೂರು ಕೇಂದ್ರ ಜುಮಾ ಮಸೀದಿ ಸಮೀಪದ ಶಹಾ ಗಾರ್ಡನ್‌ನಲ್ಲಿ ಬೃಹತ್ ಜನಜಾಗೃತಿ ಸಮಾವೇಶಕ್ಕೆ ಚಾಲನೆ ನೀಡಲಾಯಿತು.
ಖಾಝಿಗಳಾದ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್, ಅಲ್‌ಹಾಜ್ ಬೇಕಲ ಇಬ್ರಾಹಿಂ ಮುಸ್ಲಿಯಾರ್, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕಣಚೂರು ಮೋನು, ಶಾಸಕ ಯುಟಿ ಖಾದರ್, ಮಾಜಿ ಶಾಸಕ ಮೊಯ್ದಿನ್ ಬಾವಾ, ಎಸ್‌ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ರಶೀದ್ ಝೈನಿ, ಸಮಸ್ತ ಮುಶಾವರ ರಾಜ್ಯ ಕಾರ್ಯದರ್ಶಿ ಯುಕೆ ಅಬ್ದುಲ್ ಅಝೀಝ್ ದಾರಿಮಿ, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ, ಪಿಎಫ್‌ಐ ರಾಜ್ಯಾಧ್ಯಕ್ಷ ಮುಹಮ್ಮದ್ ಶಾಕಿಬ್, ಎಸ್‌ಕೆಎಸ್‌ಎಂ ದಾವಾ ಕಾರ್ಯದರ್ಶಿ ಎಂಜಿ ಮುಹಮ್ಮದ್, ಯುನಿವೆಫ್ ರಾಜ್ಯಾಧ್ಯಕ್ಷ ರಫೀಉದ್ದೀನ್ ಕುದ್ರೋಳಿ, ಡಿವೈಎಫ್‌ಐ ದ.ಕ.ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಝ್ ಹಾಗು ಇತರರು ಉಪಸ್ಥಿತರಿದ್ದಾರೆ.