ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ರಾಹುಲ್ ಗಾಂಧಿಗೆ ಅಭಿಪ್ರಾಯ ತಿಳಿಸಿದ್ದೇನೆ: ಸಿದ್ದರಾಮಯ್ಯ

Update: 2020-01-15 18:59 GMT

ಹೊಸದಿಲ್ಲಿ, ಜ. 15: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರ ಆಯ್ಕೆ ಸಂಬಂಧ ನನ್ನ ಅಭಿಪ್ರಾಯವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ತಿಳಿಸಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಆದೇಶ ಯಾವಾಗ ಬರುತ್ತದೆ ಎಂದು ಗೊತ್ತಿಲ್ಲ. ಈ ಬಾರಿ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲು ಸಾಧ್ಯತೆಗಳಿವೆ ಎಂದು ತಿಳಿಸಿದರು.

ಅಕ್ಕಿ ಕಡಿತ ಸಲ್ಲ: ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಅಕ್ಕಿಯನ್ನು ಕಡಿತ ಮಾಡಲು ರಾಜ್ಯ ಸರಕಾರ ಮುಂದಾಗಿರುವುದು ಸರಿಯಲ್ಲ. 2.34 ಕೋಟಿ ರೂ. ಬಜೆಟ್ ಮಂಡನೆ ಮಾಡುವ ಸರಕಾರಕ್ಕೆ ಬಡವರಿಗೆ 4 ಸಾವಿರ ಕೋಟಿ ರೂ.ವೆಚ್ಚ ಮಾಡಲು ಸಾಧ್ಯವಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಅವಧಿಯಲ್ಲಿ ಬಡವರಿಗೆ 10 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಬಡವರು ಹೊಟ್ಟೆ ತುಂಬಾ ಊಟ ಮಾಡಬೇಕು. ನಮ್ಮ ಅವಧಿಯಲ್ಲಿ ಪ್ರವಾಹ, ಬರವಿದ್ದರೂ ಜನ ಗುಳೇ ಹೋಗಲಿಲ್ಲ. ಹೀಗಾಗಿ ಬಡವರಿಗೆ ನೀಡುವ ಅಕ್ಕಿ ಕಡಿಮೆ ಮಾಡಬಾರದು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News