ಪ.ಬಂಗಾಳ ಬಿಜೆಪಿ ಅಧ್ಯಕ್ಷರಾಗಿ ದಿಲೀಪ್ ಘೋಷ್ ಮರುನೇಮಕ

Update: 2020-01-16 14:27 GMT

ಕೋಲ್ಕತಾ,ಜ.16: ‘ಪ್ರತಿಭಟನಕಾರರನ್ನು ನಾಯಿಗಳಂತೆ ಗುಂಡಿಕ್ಕಿ ಕೊಲ್ಲಬೇಕು’ ಎಂದು ಹೇಳಿಕೆ ನೀಡುವ ಮೂಲಕ ವಿವಾದದ ಬಿರುಗಾಳಿ ಎಬ್ಬಿಸಿರುವ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರನ್ನು ಇನ್ನೊಂದು ಅವಧಿಗೆ ಪಕ್ಷದ ವರಿಷ್ಠರಾಗಿ ನೇಮಕ ಮಾಡಲಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ದಿಲೀಪ್ ಘೋಷ್ ಅವರ ನೇತೃತ್ವದಲ್ಲಿ ಬಿಜೆಪಿಯು ಪಶ್ಚಿಮಬಂಗಾಳದ 42 ಲೋಕಸಭಾ ಕ್ಷೇತ್ರಗಳ ವೈಕಿ 18 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಸಾಧನೆ ಮಾಡಿತ್ತು. ಇದೀಗ ಲೋಕಸಭಾ ಚುನಾವಣೆ ನಡೆದ ಎಂಟು ತಿಂಗಳ ಬಳಿಕ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ.

   2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ 2 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಪಶ್ಚಿಮಬಂಗಾಳದ ವಿಧಾನಸಭಾ ಚುನಾವಣೆ ಈ ವರ್ಷ ನಡೆಯ ಲಿರುವ ಹಿನ್ನೆಲೆಯಲ್ಲಿ ಘೋಷ್ ಅವರು ಬಿಜೆಪಿ ಅಧ್ಯಕ್ಷರಾಗಿ ಸತತ ಎರಡನೆ ಬಾರಿಗೆ ಮರುನೇಮಕಗೊಂಡಿರುವುದು ಗಮನಾರ್ಹವಾಗಿದೆ.

ಆರೆಸ್ಸೆಸ್‌ನ ಮಾಜಿ ಪದಾಧಿಕಾರಿಯಾ ದಿಲೀಪ್ ಘೋಷ್ 2023ರವರೆಗೆ ಪಶ್ಚಿಮಬಂಗಾಳದಲ್ಲಿ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News