×
Ad

ಶಕ್ತಿ ರೆಸಿಡೆನ್ಶಿಯಲ್ ಸ್ಕೂಲ್‌ : ಶಿಕ್ಷಕ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ

Update: 2020-01-16 20:27 IST

ಮಂಗಳೂರು, ಜ.16: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯು ನಗರದ ಶಕ್ತಿ ರೆಸಿಡೆನ್ಶಿಯಲ್ ಸ್ಕೂಲ್‌ನಲ್ಲಿ ನಡೆಯಿತು.

ಶಕ್ತಿ ರೆಸಿಡೆನ್ಶಿಯಲ್ ಸ್ಕೂಲ್‌ನ ಅಧ್ಯಕ್ಷ ಕೆ.ಸಿ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಸಂಘದ ರಾಜ್ಯ ಗೌರವಾಧ್ಯಕ್ಷ ಅರುಣ್ ಶಹಾಪುರ್ ಪಾಲ್ಗೊಂಡಿದ್ದರು. ಸಭೆಯ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷ ಡಾ.ರಘು ಅಕ್ಮಂಚಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಗುಣ ಕೆ.ಸಿ. ನಾಕ್, ಕೆ.ಆರ್.ಎಂ.ಎಸ್.ನ ಪ್ರಧಾನ ಕಾರ್ಯದರ್ಶಿ ಡಾ. ರಾಜಣ್ಣ, ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯ ರಮೇಶ ಕೆ., ನ್ಯಾಯವಾದಿ ರವಿಚಂದ್ರ ಮೊದಲಾದವರು ಉಪಸ್ಥಿತರಿದ್ದರು. ಸಭೆಯಲ್ಲಿ ಡಾ.ಮಾಧವ ಎಂ.ಕೆ. ಸ್ವಾಗತಿಸಿ, ನಿರೂಪಿಸಿದರು.

ಸಭೆಯಲ್ಲಿ ಸಂಘದ ವಿವಿಧ ರೀತಿಯ ಚಟುವಟಿಕೆಗಳು, ಶಿಕ್ಷಕರ ಗುಣಮಟ್ಟ ಹೆಚ್ಚಿಸಲು ಬೇಕಾದ ಉಪಕ್ರಮಗಳು, ಶಿಕ್ಷಕರ ಸಮಸ್ಯೆಗಳು ಅನೇಕ ವಿಷಯಗಳು ಚರ್ಚಿಸಲ್ಪಟ್ಟವು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪದಾಧಿಕಾರಿಗಳು ತಮ್ಮ ಜಿಲ್ಲೆಯ ಕಾರ್ಯ ಚಟುವಟಿಕಗಳ ವರದಿ ನೀಡಿದರು. ಕೊನೆಯಲ್ಲಿ ರಾಜ್ಯ ಪದಾಧಿಕಾರಿಗಳ ಆಯ್ಕೆ ನಡೆಯಿತು. ರಾಜ್ಯ ಅಧ್ಯಕ್ಷರಾಗಿ ಡಾ.ರಘು ಅಕ್ಮಂಚಿ, ಪ್ರಧಾನ ಕಾರ್ಯದರ್ಶಿಯಾಗಿ ಡಾ.ರಾಜಣ್ಣ ಮರು ಆಯ್ಕೆಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News