ಸಿಬಿಐ ಅಧಿಕಾರಿ ಕೃಷ್ಣ ಮುಂದುವರಿಕೆಯ ಪ್ರಕ್ರಿಯೆ ಪ್ರಗತಿಯಲ್ಲಿದೆ: ಹೈಕೋರ್ಟ್‌ಗೆ ಹೇಳಿಕೆ

Update: 2020-01-16 15:04 GMT

ಬೆಂಗಳೂರು, ಜ.16: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿರುವ ಎ.ವೈ.ವಿ.ಕೃಷ್ಣ ಅವರ ಸೇವಾ ಅವಧಿ ಮುಂದುವರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕೇಂದ್ರ ಸರಕಾರ ಹೈಕೋರ್ಟ್‌ಗೆ ಹೇಳಿದೆ.

ಈ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಐಎಂಎ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹೈದರಾಬಾದ್ ಘಟಕದ ಜಂಟಿ ನಿರ್ದೇಶಕ ಎ.ವೈ.ವಿ.ಕೃಷ್ಣ ಅವರ ಎರವಲು ಸೇವೆ ಅವಧಿ ಜ.17ಕ್ಕೆ ಮುಗಿಯುತ್ತಿದೆ. ಈ ಹಿನ್ನೆಲೆಯಲ್ಲಿ ಅವರನ್ನು ತನಿಖಾಧಿಕಾರಿ ಸ್ಥಾನದಲ್ಲಿ ಮುಂದುವರಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಸಿಬಿಐ ಪರ ವಕೀಲರು ಜ.6ರಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ಗುರುವಾರ ಕೇಂದ್ರ ಸರಕಾರದ ಪರ ವಕೀಲರು, ಎ.ವೈ.ವಿ.ಕೃಷ್ಣ ಅವರ ಸೇವಾ ಅವಧಿ ಮುಂದುವರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News