ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ಹೆಚ್ಚಿಸಿ: ಬಸವರಾಜ ಹೊರಟ್ಟಿ ಒತ್ತಾಯ

Update: 2020-01-16 15:12 GMT

ಬೆಂಗಳೂರು, ಜ.16: ರಾಜ್ಯದಲ್ಲಿ ಪ್ರವರ್ಗ 3ಬಿ ಪಟ್ಟಿಗೆ ಬರುವ ಸಮಸ್ತ ಲಿಂಗಾಯತ ಸಮಾಜಕ್ಕೆ ಮೀಸಲಾತಿ ಪ್ರಮಾಣವನ್ನು ಶೇ.16ಕ್ಕೆ ಹೆಚ್ಚಿಸಬೇಕೆಂದು ವಿಧಾನ ಪರಿಷತ್ ಮಾಜಿ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ.

ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಬೇರೆ ಬೇರೆ ಸಮಾಜದವರು ತಮ್ಮ ಸಮಾಜದ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಬೇಡಿಕೆ ಇಟ್ಟಿರುವಾಗ, ಅವರಂತೆ ಲಿಂಗಾಯತ ಸಮುದಾಯದಲ್ಲಿ ಶೇ.80 ರಷ್ಟು ಬಡವರಿದ್ದಾರೆ. ಹೀಗಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಪ್ರಮಾಣ ಶೇ.16ಕ್ಕೆ ಹೆಚ್ಚಿಸುವುದು ನ್ಯಾಯಸಮ್ಮತವಾಗಿದೆ.

ಲಿಂಗಾಯತ ಸಮುದಾಯದಲ್ಲಿ ಬಡವರಾಗಿ ಯಾಕೆ ಹುಟ್ಟಿದ್ದೇವೆಂದು ಹಲವು ಯುವಕ, ಯುವತಿಯರು ಪರಿತಪಿಸುತ್ತಿದ್ದಾರೆ. ಹೀಗಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕೆಂಬುದು ವಿದ್ಯಾರ್ಥಿ ಹಾಗೂ ಪೋಷಕರ ಕೂಗಾಗಿದೆ. ಈ ಸಂಬಂಧ ರಾಜ್ಯ ಸರಕಾರ ಆಯೋಗವೊಂದನ್ನು ರಚಿಸಿದರೆ, ಇದಕ್ಕೆ ಅನುಕೂಲವಾಗುವಂತೆ ಎಲ್ಲ ರೀತಿಯ ಮಾಹಿತಿಗಳನ್ನು ಸಲ್ಲಿಸಲು ಸಿದ್ದರಿದ್ದೇವೆಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News